ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌: ಗಾರ್ಸಿಯಾಗೆ ಪ್ರಶಸ್ತಿ

Last Updated 14 ಅಕ್ಟೋಬರ್ 2018, 20:31 IST
ಅಕ್ಷರ ಗಾತ್ರ

ಬೀಜಿಂಗ್‌: ಫ್ರಾನ್ಸ್‌ನ ಕ್ಯಾರೋಲಿನ್‌ ಗಾರ್ಸಿಯಾ, ತಿಯಾಂಜಿನ್‌ ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಸಿಂಗಲ್ಸ್‌ ವಿಭಾಗದ ಫೈನಲ್‌ನಲ್ಲಿ ಎರಡನೇ ಶ್ರೇಯಾಂಕದ ಆಟಗಾರ್ತಿ ಗಾರ್ಸಿಯಾ 7–6, 6–3ರ ನೇರ ಸೆಟ್‌ಗಳಿಂದ ಅಗ್ರಶ್ರೇಯಾಂಕದ ಆಟಗಾರ್ತಿ ಕ್ಯಾರೋಲಿನ ಪ್ಲಿಸ್ಕೋವಾ ಅವರನ್ನು ಸೋಲಿಸಿದರು. ಈ ಮೂಲಕ ವೃತ್ತಿ ಬದುಕಿನಲ್ಲಿ ಆರನೇ ಪ್ರಶಸ್ತಿ ಗೆದ್ದರು.

ಮೊದಲ ಸೆಟ್‌ನಲ್ಲಿ ಉಭಯ ಆಟಗಾರ್ತಿಯರು ತುರುಸಿನ ಪೈಪೋಟಿ ನಡೆಸಿದರು. ಹೀಗಾಗಿ 6–6ರ ಸಮಬಲ ಕಂಡುಬಂತು. ವಿಶ್ವ ರ‍್ಯಾಂಕಿಂಗ್‌ನಲ್ಲಿ 16ನೇ ಸ್ಥಾನದಲ್ಲಿರುವ ಗಾರ್ಸಿಯಾ ‘ಟೈ ಬ್ರೇಕರ್‌’ನಲ್ಲಿ ಮಿಂಚಿನ ಆಟ ಆಡಿ ಗೆಲುವಿನ ತೋರಣ ಕಟ್ಟಿದರು.

ಜೆಕ್‌ ಗಣರಾಜ್ಯದ ಪ್ಲಿಸ್ಕೋವಾ ಎರಡನೇ ಸೆಟ್‌ನಲ್ಲಿ ತಿರುಗೇಟು ನೀಡಬಹುದೆಂಬ ನಿರೀಕ್ಷೆ ಹುಸಿಯಾಯಿತು. 24 ವರ್ಷ ವಯಸ್ಸಿನ ಗಾರ್ಸಿಯಾ, ಶರವೇಗದ ಸರ್ವ್ ಮತ್ತು ಆಕರ್ಷಕ ಕ್ರಾಸ್‌ಕೋರ್ಟ್‌ ಹೊಡೆತಗಳ ಮೂಲಕ ಎದುರಾಳಿಯನ್ನು ಕಂಗೆಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT