ತುಮಕೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಮಟ್ಟದ ‘ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್’ ನಡೆಯಲಿದೆ.

ಮೇ 3ರಿಂದ 10ರ ವರೆಗೆ ವಿಶ್ವವಿದ್ಯಾಲಯದ ಆವರಣದಲ್ಲಿರುವ ಟೆನಿಸ್ ಕೋರ್ಟ್ನಲ್ಲಿ ಪಂದ್ಯಾವಳಿ ನಡೆಯಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಶನಿವಾರ ತಿಳಿಸಿದರು.

ಈವರೆಗೆ 12 ದೇಶಗಳ ಕ್ರೀಡಾಪಟುಗಳು ನೋಂದಣಿ ಮಾಡಿಕೊಂಡಿದ್ದಾರೆ. 100ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಈ ಕ್ರೀಡಾಕೂಟವು ‘ತುಮಕೂರು ಓಪನ್ ಚಾಂಪಿಯನ್ ಷಿಪ್’ ಎಂದೇ ವಿಶ್ವ ಟೆನಿಸ್ ಭೂಪಟದಲ್ಲಿ ಗುರುತಿಸಲಾಗುತ್ತದೆ. ವಿಜೇತರಾಗಿ 35 ಪಾಯಿಂಟ್ (ಮೊದಲ ಸ್ಥಾನ) ಪಡೆದವರಿಗೆ 30 ಸಾವಿರ ಅಮೆರಿಕನ್ ಡಾಲರ್ ನೀಡಲಾಗುತ್ತದೆ. ಇಲ್ಲಿ ಆಡಿದ ಎಲ್ಲರಿಗೂ ಪಾಯಿಂಟ್ ನೀಡಲಾಗುತ್ತದೆ. ಪಂದ್ಯಾವಳಿ ಆಯೋಜಿಸಲು ಸುಮಾರು ₹1.50 ಕೋಟಿಗೂ ಹೆಚ್ಚು ಹಣ ವೆಚ್ಚವಾಗಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಂತರರಾಷ್ಟ್ರೀಯ ಮಟ್ಟದ ಪಂದ್ಯಾವಳಿ ನಡೆಸಲು ನಾಲ್ಕು ಅಂಕಣಗಳು ಇರಬೇಕು. ಈಗಾಗಲೇ ವಿ.ವಿ.ಯಲ್ಲಿ ಮೂರು ಅಂಕಣ ನಿರ್ಮಿಸಲಾಗಿದೆ. ಈಗ ಮತ್ತೊಂದು ಅಂಕಣ ನಿರ್ಮಾಣ ಮಾಡಲಾಗಿದೆ. ಅಂತರರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಹೇಳಿದರು.

ಅಂತರರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಂಗಣ, ಈಜುಕೊಳ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಸಂಬಂಧಪಟ್ಟವರು ಸ್ಥಳ ಪರಿಶೀಲಿಸಿ ಒಪ್ಪಿಗೆ ನೀಡಿದ ನಂತರ ಮುಂದಿನ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಆಶ್ವಿಜ, ಎಸ್ಪಿ ಕೆ.ವಿ.ಅಶೋಕ್, ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ನ ಅಮರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-18-2079313148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.