ತುಮಕೂರು: ಚೊಚ್ಚಲ ಆವೃತ್ತಿಯ ‘ತುಮಕೂರು ಓಪನ್’ ಐಟಿಎಫ್ ಡಬ್ಲ್ಯು35 ಮಹಿಳಾ ಟೆನಿಸ್ ಟೂರ್ನಿಗೆ ನಗರ ಸಜ್ಜಾಗಿದೆ. ₹28 ಲಕ್ಷ ಬಹುಮಾನ ಮೊತ್ತದ ಈ ಟೂರ್ನಿಯಲ್ಲಿ ವಿವಿಧ ದೇಶಗಳ ಉದಯೋನ್ಮುಖ ಆಟಗಾರ್ತಿಯರು ಹಾಗೂ ಭಾರತದ ಅಗ್ರ ಆಟಗಾರ್ತಿಯರು ಕಣಕ್ಕಿಳಿಯಲಿದ್ದಾರೆ.

ಕರ್ನಾಟಕ ಲಾನ್ ಟೆನಿಸ್ ಸಂಸ್ಥೆಯು ಜಿಲ್ಲಾ ಆಡಳಿತದ ಸಹಯೋಗದಲ್ಲಿ ಟೂರ್ನಿಯನ್ನು ಆಯೋಜಿಸಿದೆ. ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಟೆನಿಸ್ ಅಂಕಣದಲ್ಲಿ ಮೇ 3ರಿಂದ 10ರವರೆಗೆ ಪಂದ್ಯಗಳು ನಡೆಯಲಿವೆ. ಭಾರತ, ಪೋಲೆಂಡ್, ಜಪಾನ್ ಸೇರಿದಂತೆ ವಿವಿಧ ರಾಷ್ಟ್ರಗಳ 70ಕ್ಕೂ ಹೆಚ್ಚು ಟೆನಿಸ್ ಆಟಗಾರ್ತಿಯರು ಭಾಗವಹಿಸಲಿದ್ದಾರೆ.

ಆರಂಭದ ಎರಡು ದಿನ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಇಲ್ಲಿ 24 ಟೆನಿಸ್ ಆಟಗಾರ್ತಿಯರು ಮುಖಾಮುಖಿಯಾಗಲಿದ್ದಾರೆ. ಈ ಪೈಕಿ ನಾಲ್ವರು ಮುಖ್ಯ ಸುತ್ತಿಗೆ ಅರ್ಹತೆ ಪಡೆಯಲಿದ್ದಾರೆ.

ವೈಲ್ಡ್ ಕಾರ್ಡ್ ಪಡೆದ 8 ಮತ್ತು ಐಟಿಎಫ್ ರ್ಯಾಂಕಿಂಗ್ ಆಧಾರದ ಮೇಲೆ 28 ಆಟಗಾರ್ತಿಯರು ಮುಖ್ಯ ಸುತ್ತಿಗೆ ನೇರ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಡಬಲ್ಸ್ ವಿಭಾಗದಲ್ಲಿ ವಿವಿಧ ರಾಷ್ಟ್ರಗಳ 16 ತಂಡಗಳು ಪಾಲ್ಗೊಳ್ಳಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-51-1400579962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.