ತುಮಕೂರು: ವಿಶ್ವವಿದ್ಯಲಯ ಆವರಣದಲ್ಲಿ ಭಾನುವಾರ ಆರಂಭವಾದ ‘ತುಮಕೂರು ಓಪನ್’ ಐಟಿಎಫ್ ಡಬ್ಲ್ಯು 35 ಮಹಿಳಾ ವಿಶ್ವ ಟೆನಿಸ್ ಟೂರ್ನಿಯಲ್ಲಿ ಜಿಲ್ಲೆಯ ಇಬ್ಬರು ಟೆನಿಸ್ ಪಟುಗಳು ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

ಗುಬ್ಬಿಯ ಸೋಹಾ ಸಾದಿಕ್ ಮೇ 5ರಿಂದ ನಡೆಯುವ ಮುಖ್ಯ ಸುತ್ತಿನ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ದಿನ ನಡೆದ ಅರ್ಹತಾ ಸುತ್ತಿನ ಪಂದ್ಯದಲ್ಲಿ ತಾಲ್ಲೂಕಿನ ಗಿಡಗನಹಳ್ಳಿಯ ಜಿ.ಡಿ.ಮೇಘನಾ ಮೈದಾನಕ್ಕೆ ಇಳಿದರು. ಐಶ್ವರ್ಯಾ ಜಾಧವ್ ವಿರುದ್ಧ 6–4, 6–3ರಿಂದ ಸೋಲು ಅನುಭವಿಸಿದರು. ಈ ಮೂಲಕ ಟೂರ್ನಿಯಿಂದ ನಿರ್ಗಮಿಸಿದರು.

ಪಂದ್ಯಾವಳಿಯಲ್ಲಿ 70ಕ್ಕೂ ಹೆಚ್ಚು ಟೆನಿಸ್ ಪಟುಗಳು ಪಾಲ್ಗೊಳ್ಳಲಿದ್ದಾರೆ.ಭಾರತದ 10 ಕ್ರೀಡಾಪಟುಗಳಿದ್ದು, ಇದರಲ್ಲಿ 2 ಇಬ್ಬರು ತುಮಕೂರು ಜಿಲ್ಲೆಯವರು. ಇರಾನ್–ಇಸ್ರೇಲ್, ಅಮೆರಿಕ ಯುದ್ಧದ ಭೀತಿಯಿಂದಾಗಿ ಇನ್ನೂ 40 ಅಂತರರಾಷ್ಟ್ರೀಯ ಟೆನಿಸ್ ಪಟುಗಳು ಕ್ರೀಡಾಕೂಟದಿಂದ ದೂರ ಉಳಿದಿದ್ದಾರೆ.

ಕ್ರೀಡಾಂಗಣದ ಬಳಿ 4 ಸಾವಿರ ಜನ ಕುಳಿತು ಪಂದ್ಯ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅರ್ಹತಾ ಸುತ್ತಿನ ಪಂದ್ಯಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೊದಲ ದಿನದ ಹೆಚ್ಚಿನ ಸಂಖ್ಯೆಯ ಕ್ರೀಡಾ ಆಸಕ್ತರು ಪಂದ್ಯಗಳನ್ನು ವೀಕ್ಷಿಸಿದರು.

‘ಪಂದ್ಯಾವಳಿಯ ವಿಜೇತರಿಗೆ ನೀಡುವ ₹28 ಲಕ್ಷ ಬಹುಮಾನ ಮೊತ್ತವನ್ನು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಿಂದ ಪ್ರಾಯೋಜಕತ್ವ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.

‘2003ರಲ್ಲಿ ಇದೇ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಟೂರ್ನಿ ಆಯೋಜಿಸಲಾಗಿತ್ತು. ಈಗ ಮತ್ತೊಮ್ಮೆ ಪಂದ್ಯಾವಳಿ ನಡೆಸಲಾಗುತ್ತಿದೆ. ಮೇ 5ರಂದು ಮುಖ್ಯ ಸುತ್ತಿನ ಪಂದ್ಯಗಳಿಗೆ ಚಾಲನೆ ನೀಡಲಾಗುವುದು. ಉಚಿತವಾಗಿ ಪಂದ್ಯ ನೋಡಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-17-629713833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.