ಶುಕ್ರವಾರ, ಆಗಸ್ಟ್ 19, 2022
25 °C

ಅಮೆರಿಕ ಓಪನ್: ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಸೆರೆನಾ ವಿಲಿಯಮ್ಸ್‌ 

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್: ಆತಿಥೇಯ ದೇಶದ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ ಇಲ್ಲಿ ನಡೆಯುತ್ತಿರುವ ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ವಿಭಾಗದಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಬುಧವಾರ ತಡರಾತ್ರಿ ನಡೆದ ಮಹಿಳೆಯರ ಸಿಂಗಲ್ಸ್‌ನಲ್ಲಿ ವಿಶ್ವದ ಮೂರನೇ ಶ್ರೇಯಾಂಕದ ಆಟಗಾರ್ತಿ ಸೆರೆನಾ, ಬಲ್ಗೇರಿಯದ ಸ್ವೆಟಾನಾ ಪಿರೊಂಕೋವಾ ವಿರುದ್ಧ 6–4, 6–3, 6–2 ಸೆಟ್‌ಗಳಿಂದ ಗೆದ್ದರು. 

ಸೆರೆನಾ ಸೆಮಿಫೈನಲ್ಸ್‌ನಲ್ಲಿ ಬೆಲಾರಸ್‌ನ ಟೆನಿಸ್‌ ಆಟಗಾರ್ತಿ ವಿಕ್ಟೋರಿಯಾ ಅಜರೆಂಕಾ ಎದುರು ಸೆಣಸಲಿದ್ದಾರೆ. 

ಪುರುಷರ ವಿಭಾಗದಲ್ಲಿ ರಷ್ಯಾದ ಡೇನಿಯಲ್ ಮೆಡ್ವೆಡೆವ್ 7-6, 6-3, 7-6 ರಿಂದ ಆಂಡ್ರೆ ರುಬ್ಲೆವ್ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು