ಬುಧವಾರ, ಮಾರ್ಚ್ 29, 2023
32 °C

ಭಾರತೀಯರೇ ಇದ್ದ ಐತಿಹಾಸಿಕ ಮಿಶ್ರ ಡಬಲ್ಸ್‌ನಲ್ಲಿ ಸಾನಿಯಾ-ಬೋಪಣ್ಣ ಜೋಡಿಗೆ ಜಯ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Facebook/Wimbledon

ಲಂಡನ್‌: ಅನುಭವಿ ಆಟಗಾರರಾದ ರೋಹನ್‌ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಜೋಡಿ ವಿಂಬಲ್ಡನ್‌ ಚಾಂಪಿಯನ್‌ಷಿಪ್‌ನ ಮಿಶ್ರ ಡಬಲ್ಸ್‌ನಲ್ಲಿ ರಾಮಕುಮಾರ್‌ ರಾಮನಾಥನ್‌ ಮತ್ತು ಅಂಕಿತಾ ರೈನಾ ವಿರುದ್ಧ 6-2 7-6 (5) ಸೆಟ್‌ಗಳಿಂದ ವಿಜೇತರಾದರು.

ಇದೇ ಮೊದಲ ಬಾರಿಗೆ ಗ್ರ್ಯಾನ್ ಸ್ಲಾಮ್‌ನ ಮಿಶ್ರ ಡಬಲ್ಸ್‌ ಪಂದ್ಯವೊಂದರಲ್ಲಿ ಉಭಯ ತಂಡಗಳ ಆಟಗಾರರು ಭಾರತೀಯರೇ ಕಾಣಿಸಿಕೊಂಡಿದ್ದು, ಭಾರತದ ಪಾಲಿಗೆ ಇದೊಂದು ಐತಿಹಾಸಿಕ ಪಂದ್ಯವಾಗಿತ್ತು.

ರಾಮಕುಮಾರ್‌ ಅವರಿಗೆ ಗ್ರ್ಯಾನ್ ಸ್ಲಾಮ್ ಟೆನಿಸ್‌ ಟೂರ್ನಿಯ ಪಂದ್ಯದ ಮೊದಲ ಅನುಭವವಾಗಿದೆ. ಪುರುಷರ ಸಿಂಗಲ್ಸ್‌ನಲ್ಲಿ ಪ್ರವೇಶ ಪಡೆಯಲು ರಾಮಕುಮಾರ್‌ 21 ಬಾರಿ ಪ್ರಯತ್ನಿಸಿದ್ದರು.

ಮತ್ತೊಂದೆಡೆ ಪ್ರತಿಷ್ಠಿತ ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್‌ನಲ್ಲಿ ಸಾನಿಯಾ ಮಿರ್ಜಾ ಮತ್ತು ಅಮೆರಿಕದ ಬೆಥನಿ ಮಟೆಕ್‌ ಸ್ಯಾಂಡ್ಸ್‌ ಜೋಡಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

2015ರಲ್ಲಿ ಸ್ವಿಟ್ಜರ್‌ಲೆಂಡ್‌ನ ಮಾರ್ಟಿನಾ ಹಿಂಗಿಸ್ ಜೊತೆಗೂಡಿ ಸಾನಿಯಾ ಮಿರ್ಜಾ ವಿಂಬಲ್ಡನ್ ಮಹಿಳಾ ಡಬಲ್ಸ್ ಕಿರೀಟವನ್ನು ಎತ್ತಿ ಹಿಡಿದಿದ್ದರು. ಮಾರ್ಟಿನಾ ಜೊತೆ ಸೇರಿ ಅದೇ ಸಾಲಿನಲ್ಲಿ ಅಮೆರಿಕನ್ ಓಪನ್ ಮತ್ತು 2016ರಲ್ಲಿ ಆಸ್ಟ್ರೇಲಿಯನ್ ಓಪನ್ ಮಹಿಳಾ ಡಬಲ್ಸ್ ಪ್ರಶಸ್ತಿ ಗೆದ್ದಿದ್ದರು.

2005ನೇ ಇಸವಿಯಿಂದಲೂ ಸಾನಿಯಾ ಮಿರ್ಜಾ ಪ್ರಮುಖ ಟೂರ್ನಿಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು