ಗುರುವಾರ , ನವೆಂಬರ್ 26, 2020
22 °C

ಸಿಮೊನಾ ಹಲೆಪ್‌ಗೆ ಕೋವಿಡ್‌–19

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ವಿಂಬಲ್ಡನ್‌ ಟೆನಿಸ್‌ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಚಾಂಪಿಯನ್‌ ಸಿಮೊನಾ ಹಲೆಪ್‌ ಅವರಿಗೆ ಕೋವಿಡ್‌ –19 ದೃಢಪಟ್ಟಿದೆ.

‘ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಚೇತರಿಸಿಕೊಳ್ಳುತ್ತಿದ್ದೇನೆ. ಸದ್ಯ ಪ್ರತ್ಯೇಕವಾಸದಲ್ಲಿದ್ದೇನೆ‘ ಎಂದು 29 ವರ್ಷದ ರುಮೇನಿಯಾ ಆಟಗಾರ್ತಿ ಟ್ವೀಟ್‌ ಮಾಡಿದ್ದಾರೆ.

ವಿಶ್ವ ಕ್ರಮಾಂಕದಲ್ಲಿ ಹಲೆಪ್‌ ಎರಡನೇ ಸ್ಥಾನದಲ್ಲಿದ್ದಾರೆ. 2019ರಲ್ಲಿ ವಿಂಬಲ್ಡನ್ ಟ್ರೋಫಿ ಗೆದ್ದಿರುವ ಅವರು, 2018ರ ಫ್ರೆಂಚ್‌ ಓಪನ್‌ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಈ ವರ್ಷದ ವಿಂಬಲ್ಡನ್‌ ಟೂರ್ನಿಯು ಕೊರೊನಾ ವೈರಸ್‌ ಹಾವಳಿಯ ಹಿನ್ನೆಲೆಯಲ್ಲಿ ರದ್ದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು