ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯಾಸ ಪಂದ್ಯಗಳು ಮಳೆಗೆ ಆಹುತಿ

Last Updated 26 ಮೇ 2019, 16:25 IST
ಅಕ್ಷರ ಗಾತ್ರ

ಬ್ರಿಸ್ಟಲ್: ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಆಹುತಿಯಾಯಿತು. ಕಾರ್ಡಿಫ್‌ನಲ್ಲಿ ನಡೆಯಬೇಕಾಗಿದ್ದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಕೂಡ ಮಳೆಯಿಂದಾಗಿ ರದ್ದಾಯಿತು.

ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಮಳೆಯ ಕಾರಣ ತಡವಾಗಿ ಆರಂಭವಾಗಿತ್ತು. ಹೀಗಾಗಿ 31 ಓವರ್‌ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 12.4 ಓವರ್‌ಗಳಲ್ಲಿ 95 ರನ್ ಗಳಿಸಿದ್ದಾಗ ಮತ್ತೆ ಮಳೆ ಸುರಿಯಿತು.

ಆರಂಭಿಕ ಬ್ಯಾಟ್ಸ್‌ಮನ್‌ ಹಾಶಿಂ ಆಮ್ಲಾ 46 ಎಸೆತಗಳಲ್ಲಿ 51 ರನ್ ಗಳಿಸಿದ್ದರು. ಅವರ ಜೋಡಿ ಕ್ವಿಂಟನ್ ಡಿ ಕಾಕ್ 37 ರನ್ ಕಲೆ ಹಾಕಿದ್ದರು. ಈ ಸಂದರ್ಭದಲ್ಲಿ ಮತ್ತೆ ಮಳೆ ಸುರಿಯಿತು. ಕೆವಲು ತಾಸುಗಳ ನಂತರ ಪಂದ್ಯವನ್ನು ರದ್ದುಗೊಳಿಸಲಾಯಿತು.

ಪಾಕಿಸ್ತಾನ ಮತ್ತು ಬಾಂಗ್ಲಾ ನಡುವಿನ ಪಂದ್ಯದಲ್ಲಿ ಒಂದು ಎಸೆತವನ್ನು ಕೂಡ ಹಾಕಲು ಆಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT