ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

AUS vs SA: ಆಸ್ಟ್ರೇಲಿಯಾಗೆ 312 ರನ್‌ಗಳ ಗೆಲುವಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

Published 12 ಅಕ್ಟೋಬರ್ 2023, 13:09 IST
Last Updated 12 ಅಕ್ಟೋಬರ್ 2023, 13:09 IST
ಅಕ್ಷರ ಗಾತ್ರ

ಲಖನೌ: ಶ್ರೀಲಂಕಾ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ಹುಮ್ಮಸ್ಸಿನಲ್ಲಿರುವ ದಕ್ಷಿಣ ಆಫ್ರಿಕಾ ತಂಡ, ಇಂದಿನ ವಿಶ್ವಕಪ್‌ ಪಂದ್ಯದಲ್ಲಿ (ಗುರುವಾರ) ಆಸ್ಟ್ರೇಲಿಯಾಗೆ 312 ರನ್‌ಗಳ ಗೆಲುವಿನ ಗುರಿ ನೀಡಿದೆ.

ಟಾಸ್‌ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 311 ರನ್‌ ಗಳಿಸಿತು. 

ಕ್ವಿಂಟನ್‌ ಡಿ ಕಾಕ್‌ ಅಮೋಘ ಶತಕ ಸಿಡಿಸಿದರು. ಏಡನ್‌ ಮರ್ಕರಂ 56 ರನ್‌ ಬಾರಿಸುವ ಮೂಲಕ ತಂಡದ ಮೊತ್ತ 300ರ ಗಡಿ ದಾಟಲು ನೆರವಾದರು. 

ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ತಲಾ ಎರಡು ವಿಕೆಟ್‌ ಪಡೆದು ಗಮನ ಸೆಳೆದರು. ಆಸ್ಟ್ರೇಲಿಯಾ ಈ ಪಂದ್ಯವನ್ನು ಗೆಲ್ಲಬೇಕಾದರೆ 312 ರನ್‌ ಗಳಿಸಬೇಕಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT