ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಸೆಮಿಫೈನಲ್ ಪಂದ್ಯ ಬುಧವಾರದಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.
ಒಂದು ವೇಳೆ ಮಳೆಯಿಂದಾಗಿ ಸೆಮಿಫೈನಲ್ ಪಂದ್ಯ ರದ್ದುಗೊಂಡರೆ ಯಾವ ತಂಡ ಫೈನಲ್‌ಗೆ ಪ್ರವೇಶಿಸಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ಐಸಿಸಿ ಪ್ರಕಾರ, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ 120 ನಿಮಿಷಗಳ ಹೆಚ್ಚುವರಿ ಸಮಯವನ್ನು ನಿಗದಿಪಡಿಸಲಾಗಿದೆ. ನಿಗದಿತ ವೇಳಾಪಟ್ಟಿಯಂದು ಪಂದ್ಯದ ಫಲಿತಾಂಶ ಬರದಿದ್ದರೆ ಮೀಸಲು ದಿನವನ್ನು ಕಾಯ್ದಿರಿಸಲಾಗಿದೆ.
ಇನ್ನು ಮೀಸಲು ದಿನದಂದು ಕೂಡ ಫಲಿತಾಂಶ ದಾಖಲಿಸುವುದು ಸಾಧ್ಯವಾಗದಿದ್ದರೆ ಪಾಯಿಂಟ್ ಪಟ್ಟಿಯಲ್ಲಿ ಉತ್ತಮ ಸ್ಥಾನ ಹೊಂದಿರುವ ತಂಡವು ಫೈನಲ್‌ಗೆ ಪ್ರವೇಶಿಸಲಿದೆ.
ಲೀಗ್ ಹಂತದಲ್ಲಿ ಎಲ್ಲ ಒಂಬತ್ತು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಒಟ್ಟು 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
ಹಾಗೊಂದು ವೇಳೆ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ರದ್ದುಗೊಂಡರೆ ರೋಹಿತ್ ಶರ್ಮಾ ಬಳಗವು ಫೈನಲ್‌ಗೆ ಲಗ್ಗೆ ಇಡಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.