ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್‌ಗಳಾದ ಡೇವಿಡ್ ವಾರ್ನರ್ ಮತ್ತು ಮಾಕ್ಸ್‌ವೆಲ್ ಸೊಗಸಾಗಿ ಶತಕ ಸಿಡಿಸಿದರು.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು.
ಎಂದಿನ ಬ್ಯಾಟಿಂಗ್ ಲಯಕ್ಕೆ ಮರಳಿರುವ ಆಸ್ಟ್ರೇಲಿಯಾ ತಂಡದ ಬ್ಯಾಟರ್‌ಗಳು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರು.
ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 93 ಬಾಲ್‌ಗಳಲ್ಲಿ 104 ರನ್‌ಗಳಿಸಿದರು. ಆಲೌಂಡರ್ ಮ್ಯಾಕ್ಸ್‌ವೆಲ್ ಕೇವಲ 40 ಬಾಲ್‌ಗಳಲ್ಲಿ ಶತಕ ಸಿಡಿಸಿದರು. ಇದು ವಿಶ್ವಕಪ್ ಕ್ರಿಕೆಟ್‌ನಲ್ಲಿ ವೇಗದ ಶತಕವಾಯಿತು.
ಮ್ಯಾಕ್ಸ್‌ವೆಲ್ 44 ಬಾಲ್‌ಗಳಲ್ಲಿ 106 ರನ್ ಬಾರಿಸಿದರು. ಉಳಿದಂತೆ ಸ್ಮಿತ್ 76, ಲಾಬುಶೇನ್ 66 ರನ್ ಹೊಡೆಯುವ ಮೂಲಕ ತಂಡಕ್ಕೆ ಉತ್ತಮ ಕಾಣಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.