ಹೈದರಾಬಾದ್: ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು (ಶುಕ್ರವಾರ) ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ನೆದರ್ಲೆಂಡ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಸದ್ಯ ಬ್ಯಾಟಿಂಗ್ ಆರಂಭಿಸಿರುವ ಪಾಕ್ 10 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 42 ರನ್ ಗಳಿಸಿದೆ. ಇಮಾಮ್ ಉಲ್ ಹಕ್ 15, ಫಕಾರ್ ಜಮಾನ್ 12, ಬಾಬರ್ ಆಜಂ 5 ರನ್ ಗಳಿಸಿ ಔಟಾಗಿದ್ದಾರೆ. ಸಾದ್ ಶಕೀಲ್ ಹಾಗೂ ಮೊಹಮ್ಮದ್ ರಿಜ್ವಾನ್ ಕ್ರೀಸ್‌ನಲ್ಲಿದ್ದಾರೆ.
ತಂಡಗಳು: ಪಾಕಿಸ್ತಾನ: ಬಾಬರ್ ಆಜಂ (ನಾಯಕ), ಇಮಾಮ್ ಉಲ್ ಹಕ್, ಫಕಾರ್ ಜಮಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್‌ಕೀಪರ್), ಸಾದ್ ಶಕೀಲ್, ಇಫ್ತಿಕಾರ್ ಅಹಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಆಫ್ರಿದಿ, ಹ್ಯಾರಿಸ್ ರವೂಫ್
ನೆದರ್ಲೆಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ವಿಕೆಟ್ ಕೀಪರ್–ನಾಯಕ), ವಿಕ್ರಮಜೀತ್ ಸಿಂಗ್, ಮ್ಯಾಕ್ಸ್ ಒಡೊವ್ಡ್, ಬಾಸ್ ಡಿ ಲೀಡ್, ತೇಜಾ ನಿಡಮಾನೂರು, ಸಕೀಬ್ ಝಲ್ಪಿಕರ್, ಲೊಗಾನ್ ವ್ಯಾನ್ ಬೀಕ್, ರೋಲಾಫ್ ವ್ಯಾನ್ ಡೆರ್ ಮರ್ವೆ, ಆರ್ಯನ್ ದತ್, ಪಾಲ್ ವ್ಯಾನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.