ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs PAK: ಸ್ಟೇಡಿಯಂಗೆ ಹರಿದು ಬರುತ್ತಿರುವ ಜನಸಾಗರ, ಗೆಲುವಿಗಾಗಿ ಪ್ರಾರ್ಥನೆ

Published 14 ಅಕ್ಟೋಬರ್ 2023, 5:14 IST
Last Updated 14 ಅಕ್ಟೋಬರ್ 2023, 5:14 IST
ಅಕ್ಷರ ಗಾತ್ರ

ಅಹಮದಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯ ವೀಕ್ಷಣೆಗಾಗಿ ಜನಸಾಗರವೇ ಹರಿದು ಬರುತ್ತಿವೆ.

ಅಧಿಕೃತ ಮಾಹಿತಿಗಳ ಪ್ರಕಾರ ಈಗಾಗಲೇ ಟಿಕೆಟ್ ಎಲ್ಲವೂ ಮಾರಾಟವಾಗಿವೆ. ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ.

ಇಂದು ಬೆಳಿಗ್ಗೆಯಿಂದಲೇ ಸ್ಟೇಡಿಯಂಗೆ ಕ್ರಿಕೆಟ್ ಪ್ರೇಮಿಗಳು ಆಗಮಿಸುತ್ತಿದ್ದಾರೆ. ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ಅಹಮದಾಬಾದ್‌ಗೆ ಆಗಮಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕೂ ಮುನ್ನ ವಿಶೇಷ ಸಂಗೀತ ಕಾರ್ಯಕ್ರಮವನ್ನು ಬಿಸಿಸಿಐ ಆಯೋಜಿಸಿದೆ. ಸೆಲೆಬ್ರಿಟಿಗಳು ಈ ರೋಚಕ ಹಣಾಹಣಿಯನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಪೂಜೆ, ಪ್ರಾರ್ಥನೆ...

ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಪೂಜೆ ನಡೆಸಲಾಗಿದೆ. ಅಭಿಮಾನಿಗಳು ಗೆಲುವುಗಾಗಿ ಪ್ರಾರ್ಥಿಸಿದ್ದಾರೆ.

ಅಭಿಮಾನಿಗಳು ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವನ್ನು ಹಬ್ಬದಂತೆ ಕೊಂಡಾಡುತ್ತಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದು, ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT