ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs PAK: ಗಿಲ್‌ಗೆ ಅವಕಾಶ; ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

Published 14 ಅಕ್ಟೋಬರ್ 2023, 8:07 IST
Last Updated 14 ಅಕ್ಟೋಬರ್ 2023, 8:07 IST
ಅಕ್ಷರ ಗಾತ್ರ

ಅಹಮದಾಬಾದ್: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಂದು ಲಕ್ಷಕ್ಕೂ ಅಧಿಕ ಕಿಕ್ಕಿರಿದು ತುಂಬಿರುವ ಕ್ರಿಕೆಟ್ ಅಭಿಮಾನಿಗಳ ಎದುರುಗಡೆ ರೋಚಕ ಕದನ ನಡೆಯುತ್ತಿದೆ.

ಶುಭಮನ್ ಗಿಲ್‌ಗೆ ಅವಕಾಶ

ಡೆಂಗಿ ಜ್ವರದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶುಭಮನ್ ಗಿಲ್ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ. ಇವರಿಗಾಗಿ ಇಶಾನ್ ಕಿಶನ್ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ.

ಮತ್ತೊಂದೆಡೆ ಕಳೆದೆರಡು ಪಂದ್ಯಗಳಲ್ಲಿ ವಿಜೇತ ಪಾಕಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಪ್ಲೇಯಿಂಗ್ ಇಲೆವೆಲ್ ಇಂತಿದೆ

ಭಾರತ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.

ಪಾಕಿಸ್ತಾನ

ಬಾಬರ್ ಆಜಂ (ನಾಯಕ), ಅಬ್ದುಲ್ ಶಫೀಕ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಸಾದ್ ಶಕೀಲ್, ಇಫ್ತಿಕಾರ್ ಅಹಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಆಫ್ರಿದಿ ಮತ್ತು ಹ್ಯಾರಿಸ್ ರವೂಫ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT