ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

AUS vs PAK | ಆಸ್ಟ್ರೇಲಿಯಾ ಎದುರು ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಪಾಕ್‌

Published 20 ಅಕ್ಟೋಬರ್ 2023, 8:10 IST
Last Updated 20 ಅಕ್ಟೋಬರ್ 2023, 8:10 IST
ಅಕ್ಷರ ಗಾತ್ರ

ಬೆಂಗಳೂರು: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡ ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.

ಉಭಯ ತಂಡಗಳು ಈವರೆಗೆ ತಲಾ ಮೂರು ಪಂದ್ಯಗಳನ್ನು ಆಡಿವೆ. ಪಾಕಿಸ್ತಾನ ಎರಡರಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ ಒಂದರಲ್ಲಿ ಗೆದ್ದಿದೆ.

ಪಾಕ್ ತಂಡದ ಬೌಲಿಂಗ್‌ ವಿಭಾಗ ಉತ್ತಮವಾಗಿದ್ದರೂ, ಬ್ಯಾಟಿಂಗ್‌ನಲ್ಲಿ ಮೊಹಮ್ಮದ್ ರಿಜ್ವಾನ್, ಬಾಬರ್ ಆಜಂ ಮತ್ತು ಅಬ್ದುಲ್ಲಾ ಶಫೀಕ್ ಅವರ ಮೇಲೆಯೇ ಹೆಚ್ಚು ಅವಲಂಬಿತವಾಗಿದೆ.

ಆಸ್ಟ್ರೇಲಿಯಾದ ಬ್ಯಾಟಿಂಗ್ ಹಾಗೂ ಬೌಲಿಂಗ್‌ ಬಲಾಢ್ಯವಾಗಿದೆ. ಬ್ಯಾಟರ್‌ಗಳಾದ ಮಿಚೆಲ್ ಮಾರ್ಷ್‌, ಜೋಷ್ ಇಂಗ್ಲಿಸ್ ಮತ್ತು ಮಾರ್ನಸ್ ಲಾಬುಷೇನ್ ಪಾಕ್ ಬೌಲರ್‌ಗಳಿಗೆ ಕಠಿಣ ಸವಾಲಾಗಬಹುದು. ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಶ್ ಹ್ಯಾಜಲ್‌ವುಡ್ ಪಾಕ್‌ ಬ್ಯಾಟರ್‌ಗಳನ್ನು ಕಾಡಬಲ್ಲರು.

ಆಡುವ ಹನ್ನೊಂದರ ಬಳಗ

ಪಾಕಿಸ್ತಾನ: ಬಾಬರ್ ಆಜಂ (ನಾಯಕ), ಅಬ್ದುಲ್ ಶಫೀಕ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಸಾದ್ ಶಕೀಲ್, ಇಫ್ತಿಕಾರ್ ಅಹಮದ್, ಮೊಹಮ್ಮದ್ ನವಾಜ್, ಉಸಾಮ ಮಿರ್‌, ಹಸನ್ ಅಲಿ, ಶಾಹೀನ್ ಆಫ್ರಿದಿ ಮತ್ತು ಹ್ಯಾರಿಸ್ ರವೂಫ್.

ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್‌ ಲಾಬುಷೇನ್, ಗ್ಲೆನ್ ಮ್ಯಾಕ್‌ವೆಲ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಶ್ ಹ್ಯಾಜಲ್‌ವುಡ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT