ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Icc World Cup:  ಬಾಂಗ್ಲಾಗೆ 383 ರನ್‌ಗಳ ಗೆಲುವಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

Published 24 ಅಕ್ಟೋಬರ್ 2023, 12:32 IST
Last Updated 24 ಅಕ್ಟೋಬರ್ 2023, 12:32 IST
ಅಕ್ಷರ ಗಾತ್ರ

ಮುಂಬೈ: ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ರನ್‌ಗಳ ಪ್ರವಾಹವನ್ನೇ ಹರಿಸುತ್ತಿರುವ ದಕ್ಷಿಣ ಆಫ್ರಿಕಾ ತಂಡವು ಬಾಂಗ್ಲಾದೇಶದ ವಿರುದ್ಧ 382 ರನ್‌ ಪೇರಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್‌ ಕಳೆದಕೊಂಡು 382 ರನ್‌ ಪೇರಿಸಿತು. ಈ ಪಂದ್ಯವನ್ನು ಬಾಂಗ್ಲಾ ದೇಶ ಗೆಲ್ಲಬೇಕಾದರೆ 383 ರನ್‌ಗಳಿಸಬೇಕಿದೆ. 

ಅಗ್ರ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಸಿಡಿಲಬ್ಬರದ ಬ್ಯಾಟಿಂಗ್‌ನಿಂದ ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ ಪೇರಿಸಲು ಸಾಧ್ಯವಾಯಿತು.  ಕ್ವಿಂಟನ್ ಡಿಕಾಕ್ 174, ಏಡನ್ ಮರ್ಕರಂ 60, ಹೆನ್ರಿಚ್ ಕ್ಲಾಸೆನ್ 90 ರನ್‌ ಬಾರಿಸಿದರು. 

ಬಾಂಗ್ಲಾ ಪರ ಹಸನ್ ಮೆಹಮೂದ 2 ವಿಕೆಟ್‌ ಪಡೆದರೆ, ಶೊರಿಫುಲ್ ಇಸ್ಲಾಂ, ಮೆಹದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ ತಲಾ ಒಂದು ವಿಕೆಟ್‌ ಪಡೆದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT