ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್ ಫೈನಲ್: ಲೋಹದ ಹಕ್ಕಿಗಳ ಕಲರವ; ಭಾರತ-ಆಸ್ಟ್ರೇಲಿಯಾದ ಪ್ರಧಾನಿಗಳು ಭಾಗಿ

Published 17 ನವೆಂಬರ್ 2023, 10:25 IST
Last Updated 17 ನವೆಂಬರ್ 2023, 10:25 IST
ಅಕ್ಷರ ಗಾತ್ರ

ಅಹಮಬಾದಾಬ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.

ಈ ರೋಚಕ ಫೈನಲ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ನ.19) ನಡೆಯಲಿದೆ.

ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ವೈಮಾನಿಕ ಪ್ರದರ್ಶನವನ್ನು ನೀಡಲಿದೆ. ವಾಯುಪಡೆಯ ಸೂರ್ಯಕಿರಣ್ ತಂಡದ ನೇತೃತ್ವದಲ್ಲಿ ವೈಮಾನಿಕ ಸಾಹಸ ಪ್ರದರ್ಶನ ನಡೆಯಲಿದೆ. ಈ ನಿಟ್ಟಿನಲ್ಲಿ ಪೂರ್ವಭ್ಯಾಸ ಕಸರತ್ತು ಭರದಿಂದ ಸಾಗುತ್ತಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯಿಂದ ಪೂರ್ವಾಭ್ಯಾಸ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯಿಂದ ಪೂರ್ವಾಭ್ಯಾಸ 

(ಪಿಟಿಐ ಚಿತ್ರ)

ಫೈನಲ್‌ ವೀಕ್ಷಿಸಲಿರುವ ಮೋದಿ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್‌ ಮಾರ್ಲೆಸ್‌ ಅವರು ವಿಶ್ವಕಪ್‌ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ.

‘ಮೊಟೇರಾದ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಒದಗಿಸಿರುವ ಭದ್ರತೆ ಮತ್ತು ಇತರ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಶುಕ್ರವಾರ ಗಾಂಧಿನಗರದಲ್ಲಿ ಉನ್ನತಮಟ್ಟದ ಸಭೆ ನಡೆಸಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಪ್ರಧಾನಿ ಮೋದಿ ಮತ್ತು ಆಸ್ಟ್ರೇಲಿಯಾದ ಉ‍ಪ ಪ್ರಧಾನಿ ಸೇರಿದಂತೆ ಹಲವು ಗಣ್ಯರು ಪಂದ್ಯ ವೀಕ್ಷಿಸಲಿರುವುದರಿಂದ ಪಟೇಲ್‌ ಅವರು ಭದ್ರತೆ ಮತ್ತು ಇತರ ವ್ಯವಸ್ಥೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು’ ಎಂದು ಮೂಲಗಳು ತಿಳಿಸಿವೆ.

2011ರಲ್ಲಿ ತವರಿನಲ್ಲಿ ನಡೆದ ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್ ಆಗಿತ್ತು. ಅಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಭಾರತ ಜಯಭೇರಿ ಮೊಳಗಿಸಿತ್ತು.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯಿಂದ ಪೂರ್ವಾಭ್ಯಾಸ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯಿಂದ ಪೂರ್ವಾಭ್ಯಾಸ 

(ಪಿಟಿಐ ಚಿತ್ರ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT