ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಕ್ಲೀನ್ ಬೌಲ್ಡ್; ರೋಹಿತ್ ವೈಫಲ್ಯ

Published 2 ನವೆಂಬರ್ 2023, 9:26 IST
Last Updated 2 ನವೆಂಬರ್ 2023, 9:26 IST
ಅಕ್ಷರ ಗಾತ್ರ

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದಾರೆ.

ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.

ಲಂಕಾ ವೇಗಿ ದಿಲ್ಶಾನ್ ಮಧುಶಂಕ ಅವರ ಮೊದಲ ಎಸೆತವನ್ನು ಬೌಂಡರಿಗಟ್ಟಿದ ರೋಹಿತ್, ಎದುರಾಳಿ ತಂಡಕ್ಕೆ ಸ್ಪಷ್ಟ ಸೂಚನೆಯನ್ನು ರವಾನಿಸಿದರು. ಆದರೆ ಎರಡನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ನಿರಾಸೆ ಮೂಡಿಸಿದರು.

ಇಂಗ್ಲೆಂಡ್ ವಿರುದ್ಧ ನಡೆದ ಕಳೆದ ಪಂದ್ಯದಲ್ಲಿ ಸಮಯೋಚಿತ ಅರ್ಧಶತಕ ಗಳಿಸಿದ್ದ (87) ರೋಹಿತ್ ಶರ್ಮಾ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಪ್ರಸ್ತುತ ಸಾಗುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 402 ರನ್ ಗಳಿಸಿರುವ ರೋಹಿತ್, ರನ್ ಗಳಿಕೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದ ರೋಹಿತ್, ಬಳಿಕ ಅಫ್ಗಾನಿಸ್ತಾನ ವಿರುದ್ಧ ಭರ್ಜರಿ ಶತಕ (131) ಗಳಿಸಿದ್ದರು. ಪಾಕಿಸ್ತಾನ ವಿರುದ್ಧ 86 ರನ್ ಗಳಿಸಿ ಮಿಂಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT