ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಮೋದಿ ಭೇಟಿ: ಕೀರ್ತಿ ಆಜಾದ್ ಆಕ್ಷೇಪ

Published 22 ನವೆಂಬರ್ 2023, 5:12 IST
Last Updated 22 ನವೆಂಬರ್ 2023, 5:12 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ಕೊಟ್ಟ ಬಗ್ಗೆ 1983ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ, ತೃಣಮೂಲ ಕಾಂಗ್ರೆಸ್ ನಾಯಕ ಕೀರ್ತಿ ಅಜಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಡ್ರೆಸ್ಸಿಂಗ್ ರೂಮ್ ಎಂಬುದು ಯಾವುದೇ ತಂಡಕ್ಕೆ ಪವಿತ್ರ ಸ್ಥಳ. ತಂಡದ ಆಟಗಾರರು ಮತ್ತು ಆಡಳಿತ ಮಂಡಳಿ ಸಿಬ್ಬಂದಿ ಬಿಟ್ಟು ಯಾರಿಗೂ ಅವಕಾಶ ಕೊಡಬಾರದು ಎಂದು ಐಸಿಸಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಭಾರತದ ಪ್ರಧಾನ ಮಂತ್ರಿಗಳು ಆಟಗಾರರನ್ನು ಡ್ರೆಸ್ಸಿಂಗ್ ರೂಮ್ ಹೊರಗಡೆ ಖಾಸಗಿ ಭೇಟಿ ಸ್ಥಳದಲ್ಲಿ ಭೇಟಿಯಾಗಬೇಕಿತ್ತು. ನಾನು ಇದನ್ನು ಒಬ್ಬ ಕ್ರೀಡಾಪಟುವಾಗಿ ಹೇಳುತ್ತಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎಂದಿದ್ಧಾರೆ.

ಪ್ರಧಾನಿಗಳು ಎಲ್ಲಿಯಾದರೂ ಯಾವ ಸಮಯದಲ್ಲಾದರೂ ಭೇಟಿ ಮಾಡಬಹುದು. ಆದರೆ, ಅವರು ನಿಯಮಗಳನ್ನು ಮುರಿಯಬಾರದು. ಇದು ರಾಜಕೀಯವಲ್ಲ ಕ್ರೀಡೆ. ಆಟಗಾರರ ಕುಟುಂಬದ ಸದಸ್ಯರು, ನಿವೃತ್ತ ಕ್ರೀಡಾಳುಗಳಿಗೂ ಡ್ರೆಸ್ಸಿಂಗ್ ರೂಮ್‌ ಪ್ರವೇಶಕ್ಕೆ ನಿಷೇಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಬೆಡ್‌ರೂಮ್, ಡ್ರೆಸ್ಸಿಂಗ್ ರೂಮ್ ಅಥವಾ ಶೌಚಾಲಯಕ್ಕೆ ಬಂದು ಶುಭಾಶಯ, ಸಾಂತ್ವನ ಹೇಳಲು ಪ್ರಧಾನಿ ನರೇಂದ್ರ ಮೋದಿಯವರು ಅವರ ಬೆಂಬಲಿಗರಿಗೆ ಅವಕಾಶ ನೀಡುತ್ತಾರೆಯೇ? ಎಂದು ಆಜಾದ್ ಪ್ರಶ್ನಿಸಿದ್ದಾರೆ, ಕ್ರೀಡಾಪಟುಗಳು ರಾಜಕಾರಣಿಗಳಿಗಿಂತ ಹೆಚ್ಚು ಶಿಸ್ತು ಹೊಂದಿರುವವರು ಎಂದು ಹೇಳಿದ್ದಾರೆ.

1983ರಲ್ಲಿ ದೇಶಕ್ಕೆ ವಿಶ್ವಕಪ್ ತಂದುಕೊಟ್ಟ ತಂಡದ ನಾಯಕ ಕಪಿಲ್ ದೇವ್ ಅವರನ್ನು ವಿಶ್ವಕಪ್ ಫೈನಲ್ ಪಂದ್ಯಕ್ಕೆ ಆಹ್ವಾನಿಸಿಲ್ಲ. ಈಗ ಹೇಳಿ ಯಾರು ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT