ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್‌ನಲ್ಲಿ ಅತಿಹೆಚ್ಚು ಶತಕ: ಸಚಿನ್ ದಾಖಲೆ ಮುರಿದ ರೋಹಿತ್ ಶರ್ಮಾ

Published 11 ಅಕ್ಟೋಬರ್ 2023, 15:12 IST
Last Updated 11 ಅಕ್ಟೋಬರ್ 2023, 15:12 IST
ಅಕ್ಷರ ಗಾತ್ರ

ಬೆಂಗಳೂರು: ಅಫ್ಗಾನಿಸ್ತಾನ ಎದುರಿನ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ದಿಗ್ಗಜ ಬ್ಯಾಟರ್‌ ಸಚಿನ್ ತೆಂಡೂಲ್ಕರ್‌ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮೀರಿ ನಿಂತರು.

ಇಂದು ( ಅ.11) ನಡೆದ ಅಫ್ಗಾನಿಸ್ತಾನ ಎದುರಿನ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್‌ ನಡೆಸಿದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ವಿಶ್ವಕಪ್‌ನಲ್ಲಿ 7 ಶತಕಗಳನ್ನು ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್‌ ದಾಖಲೆ ಮುರಿದರು.

5 ವಿಶ್ವಕಪ್‌ ಟೂರ್ನಿಗಳಲ್ಲಿ ಸಚಿನ್ 6 ಶತಕಗಳನ್ನು ಸಿಡಿಸಿದ್ದರು. ರೋಹಿತ್‌ ಶರ್ಮಾ 3 ವಿಶ್ವಕಪ್‌ಗಳಲ್ಲೇ ಈ ದಾಖಲೆ ಮುರಿದರು.

ಇದೇ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ ಎಂಬ ಶ್ರೇಯಕ್ಕೆ ಭಾಜನರಾದರು.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್‌ ಎಂಬ ದಾಖಲೆ ಈವರೆಗೆ ವೆಸ್ಟ್‌ ಇಂಡೀಸ್‌ನ ಸ್ಫೋಟಕ ಬ್ಯಾಟರ್‌ ಕ್ರಿಸ್‌ ಗೇಲ್ ಅವರ ಹೆಸರಿನಲ್ಲಿತ್ತು. ಇದೀಗ ಆ ದಾಖಲೆಯನ್ನು ರೋಹಿತ್‌ ಕಸಿದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT