ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

World Cup 2023: ನಾಳೆ ಭಾರತ– ಪಾಕ್ ಮುಖಾಮುಖಿ, ಅಹಮದಾಬಾದ್‌ನಲ್ಲಿ ಬಿಗಿ ಭದ್ರತೆ

Published 13 ಅಕ್ಟೋಬರ್ 2023, 7:25 IST
Last Updated 13 ಅಕ್ಟೋಬರ್ 2023, 7:25 IST
ಅಕ್ಷರ ಗಾತ್ರ

ಅಹಮದಾಬಾದ್: ವಿಶ್ವಕಪ್​ ಟೂರ್ನಿ ಆರಂಭವಾಗಿದ್ದು, ಇಡೀ ಜಗತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ತುದಿಗಾಲಲ್ಲಿ ನಿಂತಿದೆ.

ಅಕ್ಟೋಬರ್ 14ರಂದು (ಶನಿವಾರ) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಭಾರಿ ಕುತೂಹಲ ಮೂಡಿಸಿದೆ. ‌

ಈ ಹೈವೋಲ್ಟೇಜ್‌ ಪಂದ್ಯಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಗುಜರಾತ್‌ ಪೊಲೀಸ್‌, ರಾಷ್ಟ್ರೀಯ ಭದ್ರತಾ ಪಡೆ, ಕ್ಷೀಪ್ರ ಕಾರ್ಯಾಚರಣೆ ಪಡೆ ಮತ್ತು ಹೋಮ್‌ಗಾರ್ಡ್‌ ಸೇರಿದಂತೆ 11 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕ್ರೀಡಾಂಗಣದ ಸುತ್ತಮುತ್ತ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಪಂದ್ಯದ ವೇಳೆ ಡ್ರೋನ್ ನಿರಂತರವಾಗಿ 12 ಗಂಟೆಗಳ ಕಾಲ ಹಾರಾಟ ನಡೆಸಲಿದೆ. ಇದು 120 ಮೀಟರ್ ಎತ್ತರದಲ್ಲಿ ಹಾರಾಟ ನಡೆಸಲಿದ್ದು, 5 ಕಿ.ಮೀ. ವ್ಯಾಪ್ತಿಯವರೆಗೆ ಪೂರ್ಣ ಪ್ರಮಾಣದ ಎಚ್‌ಡಿ ದೃಶ್ಯಾವಳಿಗಳನ್ನು ಸೆರೆಹಿಡಿಯಲಿದೆ ಎಂದು ಕ್ರೈಂ ಬ್ರಾಂಚ್ ಕಾನ್‌ಸ್ಟೆಬಲ್, ಡ್ರೋನ್ ಆಪರೇಟರ್ ರವೀಂದ್ರ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT