ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ–20 ವಿಶ್ವಕಪ್ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ (ಮಾ.8) ನಡೆಯಲಿರುವ ಪಂದ್ಯಕ್ಕಾಗಿ ಅಹಮದಾಬಾದ್ಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಹಾಗೂ ಆಕಾಶ ಏರ್ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ವಿಶೇಷ ವಿಮಾನ ಸೌಲಭ್ಯವನ್ನು ಕಲ್ಪಿಸಿವೆ.

ಅಹಮದಾಬಾದ್ನಲ್ಲಿರುವ ಜಗತ್ತಿನ ಅತಿದೊಡ್ಡ ಕ್ರಿಕೆಟ್ ಮೈದಾನವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಪಂದ್ಯದ ನೇರ ವೀಕ್ಷಣೆಗಾಗಿ ಮೈದಾನಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ದೆಹಲಿ, ಬೆಂಗಳೂರು, ಮುಂಬೈ ಹಾಗೂ ಹೈದರಾಬಾದ್ನಿಂದ ಹೆಚ್ಚಿನ ವಿಮಾನ ಸೌಲಭ್ಯ ನೀಡಲಾಗುತ್ತಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.

ಆಕಾಶ ಏರ್, ಮುಂಬೈ ಹಾಗೂ ಅಹಮದಾಬಾದ್ ನಡುವೆ ವಿಶೇಷ ವಿಮಾನ ಸೌಲಭ್ಯ ನೀಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.