ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿ20 ವಿಶ್ವಕಪ್‌ ಗೆದ್ದ ಟೀಮ್ ಇಂಡಿಯಾಕ್ಕೆ BCCI ಘೋಷಿಸಿದ ಬಹುಮಾನವೆಷ್ಟು?

Published 1 ಜುಲೈ 2024, 3:07 IST
Last Updated 1 ಜುಲೈ 2024, 3:07 IST
ಅಕ್ಷರ ಗಾತ್ರ

ನವದೆಹಲಿ: ಟಿ20 ಕ್ರಿಕೆಟ್ ವಿಶ್ವಕಪ್ ಜಯಿಸಿದ ಟೀಮ್ ಇಂಡಿಯಾ ಆಟಗಾರರನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಶ್ಲಾಘಿಸಿದ್ದು, ಐತಿಹಾಸಿಕ ಸಾಧನೆ ಮಾಡಿದ ತಂಡಕ್ಕೆ ₹125 ಕೋಟಿ ಬಹುಮಾನವನ್ನು ಘೋಷಿಸಿದ್ದಾರೆ.

‘ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ ₹125 ಕೋಟಿ ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗಿದೆ’ ಎಂದು ಜಯ್‌ ಶಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವದಡಿ ಭಾರತ ತಂಡವು ಗಮನಾರ್ಹ ಸಾಧನೆ ಮಾಡಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲೇ ಇಡೀ ಟೂರ್ನಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯವಾಗಿ ಉಳಿದು ವಿಶ್ವಕಪ್ ಗೆದ್ದ ಮೊದಲ ತಂಡವಾಗಿದೆ’ ಎಂದು ಶಾ ಶ್ಲಾಘಿಸಿದ್ದಾರೆ.

‘ಟೀಮ್ ಇಂಡಿಯಾ ಆಟಗಾರರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಭಾರತ ತಂಡ ಟೂರ್ನಿಯಲ್ಲಿ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು’ ಎಂದು ಹೇಳಿದ್ದಾರೆ.

ಬಾರ್ಬಡೋಸ್‌ನ ಬ್ರಿಜ್‌ಟೌನ್‌ನಲ್ಲಿ ನಡೆದ ಫೈನಲ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಮಣಿಸುವ ಮೂಲಕ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT