ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC World cup 2023: ಭಾರತ ತಂಡವನ್ನು ತಡೆಯುವುದು ಅಸಾಧ್ಯ: ಪ್ರಧಾನಿ ಮೋದಿ

Published 3 ನವೆಂಬರ್ 2023, 5:27 IST
Last Updated 3 ನವೆಂಬರ್ 2023, 5:27 IST
ಅಕ್ಷರ ಗಾತ್ರ

ನವದೆಹಲಿ: ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವಿಶ್ವಕಪ್‌ನಲ್ಲಿ ಭಾರತವನ್ನು ತಡೆಯಲು ಸಾಧ್ಯವಿಲ್ಲ ಎಂದು ಬಣ್ಣಿಸಿದ್ದಾರೆ.

ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರ ವೇಗದ ಬೌಲಿಂಗ್ ಪ್ರದರ್ಶನದಿಂದ ದ್ವೀಪರಾಷ್ಟ್ರ ತಂಡವನ್ನು ದಾಖಲೆಯ 302 ರನ್‌ಗಳ ಅಂತರಗಳಿಂದ ಮಣಿಸಿತು. ಆ ಮೂಲಕ 2023ರ ವಿಶ್ವಕಪ್‌ನ ಸೆಮಿಫೈನಲ್‌ ಹಂತಕ್ಕೆ ಭಾರತ ಪ್ರವೇಶಿಸಿತು.

ಮೈಕ್ರೊ ಬ್ಲಾಗಿಂಗ್ ತಾಣ ಎಕ್ಸ್‌ನ ತಮ್ಮ ಖಾತೆಯಲ್ಲಿ ಈ ಸಂತಸವನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಶ್ರೀಲಂಕಾ ವಿರುದ್ಧದ ಅದ್ಭುತ ವಿಜಯದ ಮೂಲಕ ಭಾರತದ ಆಟಗಾರರು ಒಂದು ತಂಡವಾಗಿ ಹಾಗೂ ಅತ್ಯಂತ ದೃಢತೆಯಿಂದ ಆಡಿದ್ದಾರೆ. ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT