ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್ ಕ್ರಿಕೆಟ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ನಿಲುಗಡೆ ನಿರ್ಬಂಧ

Published 25 ಅಕ್ಟೋಬರ್ 2023, 16:18 IST
Last Updated 25 ಅಕ್ಟೋಬರ್ 2023, 16:18 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅ. 26ರಂದು ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯಲಿದ್ದು, ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.

‘ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ’ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

‘ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರು ವಾಹನ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT