ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC World Cup 2023: ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ

Published 2 ನವೆಂಬರ್ 2023, 11:32 IST
Last Updated 2 ನವೆಂಬರ್ 2023, 11:32 IST
ಅಕ್ಷರ ಗಾತ್ರ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ.

ವಾಂಖೆಡೆ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ (88) ಗಳಿಸಿದ್ದಾರೆ.

ಈ ಮೂಲಕ 2023ನೇ ಸಾಲಿನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಸಹಸ್ರ ರನ್‌ಗಳ ಸಾಧನೆ ಮಾಡಿದ್ದಾರೆ.

ಅಲ್ಲದೆ ಏಕದಿನ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಎಂಟು ಸಲ 1,000ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಸಚಿನ್ ಏಳು ಬಾರಿ ಇದೇ ಸಾಧನೆ ಮಾಡಿದ್ದರು.

ಕ್ಯಾಲೆಂಡರ್ ವರ್ಷದಲ್ಲಿ 1000ಕ್ಕೂ ಹೆಚ್ಚು ರನ್ ಸಾಧನೆ (ಏಕದಿನ):

ವಿರಾಟ್ ಕೊಹ್ಲಿ: 8 ಸಲ (2011, 2012, 2013, 2014, 2017, 2018, 2019, 2023)

ಸಚಿನ್ ತೆಂಡೂಲ್ಕರ್: 7 ಸಲ (1994, 1996, 1997, 1998, 2000, 2003, 2007)

ಇನ್ನು ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ 13ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್‌ಗಳ ಸಾಧನೆ ಮಾಡಿದ್ದಾರೆ. ಕೊಹ್ಲಿ ಅವರು 33ನೇ ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ.

ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಸಚಿನ್ ಒಟ್ಟು 21 ಸಲ (44 ಇನಿಂಗ್ಸ್), 50 ಅಥವಾ ಅದಕ್ಕಿಂತಲೂ ಹೆಚ್ಚು ರನ್‌ಗಳ ಸಾಧನೆ ಮಾಡಿದ್ದರು.

ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

(ಪಿಟಿಐ ಚಿತ್ರ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT