ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

World Cup | ಭಾರತಕ್ಕೆ ಸೆಮಿಫೈನಲ್‌ನಲ್ಲಿ ಮತ್ತೆ ನ್ಯೂಜಿಲೆಂಡ್ ಸವಾಲು

Published 11 ನವೆಂಬರ್ 2023, 16:07 IST
Last Updated 11 ನವೆಂಬರ್ 2023, 16:07 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ಗೆ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ತಂಡಗಳು ಅರ್ಹತೆ ಗಿಟ್ಟಿಸಿವೆ.

ಸೆಮಿಫೈನಲ್‌ ಪಂದ್ಯಗಳು ನವೆಂಬರ್‌ 15, 16ರಂದು ಕ್ರಮವಾಗಿ ಮುಂಬೈ ಮತ್ತು ಕೋಲ್ಕತ್ತದಲ್ಲಿ ನಡೆಯಲಿವೆ.

ಲೀಗ್‌ ಹಂತದಲ್ಲಿ ಆಡಿರುವ ಎಲ್ಲ ಪಂದ್ಯಗಳಲ್ಲೂ ಗೆದ್ದು ಪಾಯಿಂಟ್‌ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತಕ್ಕೆ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್‌ ಮೊದಲ ಸೆಮಿಫೈನಲ್‌ನಲ್ಲಿ ಸವಾಲೊಡ್ಡಲಿದೆ.

ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

2019 ಸೋಲಿಗೆ ಮುಯ್ಯಿ?

2019ರ ವಿಶ್ವಕಪ್‌ನಲ್ಲಿಯೂ ಭಾರತ ಮತ್ತು ನ್ಯೂಜಿಲೆಂಡ್‌ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತ 18 ರನ್‌ ಅಂತರದಿಂದ ಸೋಲು ಅನುಭವಿಸಿತ್ತು. ಹೀಗಾಗಿ, ಈ ಬಾರಿ ಮುಯ್ಯಿ ತೀರಿಸಿಕೊಳ್ಳುವ ಅವಕಾಶ ರೋಹಿತ್‌ ಶರ್ಮಾ ಬಳಗಕ್ಕೆ ಇದೆ.

ಲೀಗ್‌ ಹಂತದ ಸಾಧನೆ

ಭಾರತ: 8 ಪಂದ್ಯಗಳಲ್ಲಿ 8 ಜಯ

ದಕ್ಷಿಣ ಆಫ್ರಿಕಾ: 9 ಪಂದ್ಯಗಳಲ್ಲಿ 7 ಜಯ

ಆಸ್ಟ್ರೇಲಿಯಾ: 9 ಪಂದ್ಯಗಳಲ್ಲಿ 7 ಜಯ

ನ್ಯೂಜಿಲೆಂಡ್‌: 9 ಪಂದ್ಯಗಳಲ್ಲಿ 5 ಜಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT