ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

World Cup: ಪಾಕ್ ವಿರುದ್ಧ ಭಾರತ ಹೊಸ ಜರ್ಸಿಯಲ್ಲಿ ಕಣಕ್ಕೆ, BCCI ಹೇಳಿದ್ದೇನು?

Published 9 ಅಕ್ಟೋಬರ್ 2023, 5:15 IST
Last Updated 9 ಅಕ್ಟೋಬರ್ 2023, 5:15 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವಕಪ್​ ಟೂರ್ನಿ ಆರಂಭವಾಗಿದ್ದು, ಇಡೀ ಜಗತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ತುದಿಗಾಲಲ್ಲಿ ನಿಂತಿದೆ.

ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗಾಗಲೇ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ.

ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಹೊಸ ಜರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ ಎಂಬ ಮಾತುಗಳು ಹರಿದಾಡಿದ್ದವು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್, ವಿಶ್ವಕಪ್‌ನಲ್ಲಿ ಭಾರತ ತಂಡ ಪರ್ಯಾಯ ಮ್ಯಾಚ್ ಕಿಟ್ ಅನ್ನು ಧರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ್ಯಾಯ ಕಿಟ್ (ಜರ್ಸಿ) ಧರಿಸಲಿದೆ ಎಂಬ ಮಾಧ್ಯಮಗಳ ವರದಿಗಳು ಆಧಾರರಹಿತವಾಗಿವೆ. ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರು ನೀಲಿ ಬಣ್ಣದಲ್ಲೇ ಆಡಲಿದ್ದಾರೆ’ ಎಂದು ಹೇಳಿದ್ದಾರೆ.

2019ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರ್ಯಾಯ ಕಿಟ್ ಅನ್ನು ಧರಿಸಿತ್ತು. ಪಂದ್ಯವೊಂದರಲ್ಲಿ ಇಂಗ್ಲೆಂಡ್ ಮತ್ತು ಭಾರತ ಎರಡೂ ತಂಡಗಳ ಆಟಗಾರರು ನೀಲಿ ಬಣ್ಣದ ಜರ್ಸಿಯನ್ನು ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT