ಬೆಂಗಳೂರು: ~ವಾಲ್~ ಖ್ಯಾತಿಯ ಕರ್ನಾಟಕದ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಅಂತರ ರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುವ ಮೂಲಕ ತಮ್ಮ 16 ವರ್ಷಗಳ ಕ್ರಿಕೆಟ್ ಜೀವನಕ್ಕೆ ಮಂಗಳ ಹಾಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ~ ಹೊಸಬರಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ವಿದಾಯ ಹೇಳಲು ಇದು ಸೂಕ್ತ ಸಮಯ, ಇಲ್ಲಿಯವರೆಗೆ ಸಾಗಿ ಬಂದ ಕ್ರಿಕೆಟ್ ಜೀವನ ನನಗೆ ತೃಪ್ತಿ ತಂದಿದೆ ಅದಕ್ಕಾಗಿ ನಾನು ಕೋಚ್, ಸಹ ಆಟಗಾರರು ಹಾಗೂ ನನ್ನಲ್ಲಿ ನಂಬಿಕೆ ಇರಿಸಿರುವ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ~ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಎನ್. ಶ್ರೀನಿವಾಸನ್ ಹಾಗೂ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.