ನವದೆಹಲಿ: ಚುರುಕಿನೊಂದಿಗೆ ಕುತೂಹಲದ ಆಟ ಪ್ರದರ್ಶಿಸಿದ ಭಾರತದ ಪಿ.ವಿ. ಸಿಂಧು ಅವರು ವಿಶ್ವದ ನಾಲ್ಕನೇ ಅಗ್ರ ಶ್ರೇಯಾಂಕಿತ ಆಟಗಾರ್ತಿ ಕೊರಿಯಾದ ಸಂಗ್ ಜಿ ಯುನ್ ಎದುರು ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದರು.

ಕಿಕ್ಕಿರಿದು ತುಂಬಿದ್ದ ಕ್ರಿಡಾಂಗಣದಲ್ಲಿ ನಡೆದ ಇಂಡಿಯಾ ಓಪನ್ ಸೂಪರ್ ಸರಣಿಯಲ್ಲಿ ಶನಿವಾರ ನಾಲ್ಕರ ಘಟ್ಟದ ಪಂದ್ಯದಲ್ಲಿ ಸಿಂಧು 21-18, 14-21, 21-14ರಿಂದ ಸಂಗ್ ಜಿ ಯುನ್ ಅವರನ್ನು ಮಣಿಸಿದರು.

ಶುಕ್ರವಾರ ನಡೆದ ಎಂಟರ ಘಟ್ಟದ ಪಂದ್ಯದಲ್ಲಿ ಸಿಂಧು ಅವರು 21-16, 22-20ರಿಂದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಅವರ ಎದುರು ಜಯ ಗಳಿಸಿದ್ದರು.

ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಸಿಂಧು ಅವರು ಫೈನಲ್‌ನಲ್ಲಿ ಕ್ಯಾರೊಲಿನಾ ಮರಿನ್ ವಿರುದ್ಧ ಸೆಣಸಲಿದ್ದಾರೆ. ಪಂದ್ಯದ ವೀಕ್ಷಣೆಗೆ ಅಭಿಮಾನಿಗಳು ಕಾತರರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.