ಬೆಂಗಳೂರು: ಈ ಬಾರಿಯ ಐಪಿಎಲ್ ಹರಾಜು ಸಂದರ್ಭದಲ್ಲಿ ಮೂಲಬೆಲೆಗೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಪಾಲಾದ ಬ್ಯಾಟಿಂಗ್ ದೈತ್ಯ, ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಆಡಿದ ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ್ದು ಎರಡನೇ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ್ದಾರೆ. ಅವರ ಬ್ಯಾಟಿಂಗ್ ವೈಭವದಿಂದಾಗಿ ಐಪಿಎಲ್ ಮತ್ತೆ ಕಳೆಗಟ್ಟಿದೆ.