ಕೋಲ್ಕತ್ತ: ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎದುರಿನ ಮೊದಲ ಟೆಸ್ಟ್ ಪಂದ್ಯದ ಕೊನೆಯ ದಿನ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.
ಮೊದಲ ಇನಿಂಗ್ಸ್ನಲ್ಲಿ ಖಾತೆ ತೆರೆಯಲು ವಿಫಲವಾಗಿದ್ದ ಕೊಹ್ಲಿ ಎರಡನೇ ಇನಿಂಗ್ಸ್ನಲ್ಲಿ ಜವಾಬ್ದಾರಿಯುತ ಶತಕ ಸಿಡಿಸಿದರು. ಇದು ಟೆಸ್ಟ್ ಕ್ರಿಕೆಟ್ನಲ್ಲಿ ಅವರ 18ನೇ ಶತಕ.
ಈಗಾಗಲೇ ಏಕದಿನ ಕ್ರಿಕೆಟ್ನಲ್ಲಿ 32 ಬಾರಿ ಮೂರಂಕಿ ದಾಟಿರುವ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 50ನೇ ಶತಕ ಸಿಡಿಸಿ, ಈ ಸಾಧನೆ ಮಾಡಿದ ವಿಶ್ವದ 8ನೇ ಬ್ಯಾಟ್ಸ್ಮನ್ ಎನಿಸಿದರು.
ಸದ್ಯ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್ ಸೇರಿ ಒಟ್ಟು 318 ಪಂದ್ಯಗಳನ್ನಾಡಿರುವ ಕೊಹ್ಲಿ ವೇಗವಾಗಿ 50ಶತಕ ಸಿಡಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾದ ಹಾಶಿಂ ಆಮ್ಲಾ ಮೊದಲ ಸ್ಥಾನದಲ್ಲಿದ್ದಾರೆ. ಆಮ್ಲಾ ಕೇವಲ 310ಪಂದ್ಯಗಳಲ್ಲೇ 54 ಶತಕ ಸಿಡಿಸಿದ್ದಾರೆ.
ಒಟ್ಟಾರೆ ಅಂತರರಾಷ್ಟ್ರೀಯ ಕ್ರಿಕಟ್ನಲ್ಲಿ ಅತಿ ಹೆಚ್ಚು(100) ಶತಕ ಗಳಿಸಿರುವ ದಾಖಲೆ ಭಾರತದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ.