ಜೊಹಾನ್ಸ್‌ಬರ್ಗ್ (ಎಎಫ್‌ಪಿ): ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇಯ್ನ್ ಅವರು ಕೌಂಟಿ ಕ್ರಿಕೆಟ್ ಟೂರ್ನಿಯಲ್ಲಿ ಹ್ಯಾಂಪ್‌ಶೈರ್ ತಂಡದ ಪರ ಆಡಲು ನಿರ್ಧರಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ ನಡೆದಿದ್ದ ಭಾರತದ ಎದುರಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಸ್ಟೇಯ್ನ್ ಹಿಮ್ಮಡಿ ಗಾಯಕ್ಕೆ ಒಳಗಾಗಿದ್ದರು. ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದರಿಂದ ಅವರು ಭಾರತದ ಎದುರಿನ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಲ್ಲಿ ಆಡಿರಲಿಲ್ಲ. ಆಸ್ಟ್ರೇಲಿಯಾ ಎದುರಿನ ಟೆಸ್ಟ್ ಸರಣಿಗೂ ಅಲಭ್ಯರಾಗಿದ್ದರು.

‘ಗಾಯದಿಂದ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಮುಂಬರುವ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡುವುದು ನನ್ನ ಗುರಿ. ಈ ಬಾರಿಯ ಐಪಿಎಲ್‌ನಲ್ಲಿ ನಾನು ಭಾಗವಹಿಸುತ್ತಿಲ್ಲ. ಹೀಗಾಗಿ ಇನ್ನು ಎರಡು ತಿಂಗಳ ಕಾಲ ವಿಶ್ರಾಂತಿ ಸಿಗಲಿದೆ. ನಂತರ ಕೌಂಟಿಯಲ್ಲಿ ಆಡುತ್ತೇನೆ’ ಎಂದು ಸ್ಟೇಯ್ನ್ ಹೇಳಿದ್ದಾರೆ.

ಶಾನ್ ಪೊಲಾಕ್ ಅವರು ಟೆಸ್ಟ್ ಮಾದರಿಯಲ್ಲಿ 421 ವಿಕೆಟ್ ಉರುಳಿಸಿದ್ದು ಈ ಸಾಧನೆ ಮಾಡಿದ ದಕ್ಷಿಣ ಆಫ್ರಿಕಾದ ಮೊದಲ ಬೌಲರ್ ಎಂಬ ಹಿರಿಮೆ ಹೊಂದಿದ್ದಾರೆ. ಪೊಲಾಕ್ ದಾಖಲೆ ಮೀರಿ ನಿಲ್ಲಲು ಸ್ಟೇಯ್ನ್ ಇನ್ನು ಮೂರು ವಿಕೆಟ್ ಉರುಳಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.