ಪುಣೆ: ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಐಪಿಎಲ್ 11ನೇ ಆವೃತ್ತಿಯ ಪಂದ್ಯದಲ್ಲಿ ಭಾನುವಾರ ಮುಖಾಮುಖಿಯಾಗಲಿವೆ.

ಬಲಿಷ್ಠ ತಂಡಗಳ ನಡುವಣ ಈ ಹೋರಾಟಕ್ಕೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ (ಎಂಸಿಎ) ಕ್ರೀಡಾಂಗಣದಲ್ಲಿ ವೇದಿಕೆ ಸಿದ್ಧವಾಗಿದೆ.

ಕೇನ್ ವಿಲಿಯಮ್ಸನ್ ಸಾರಥ್ಯದ ಸನ್‌ರೈಸರ್ಸ್ 11 ಪಂದ್ಯಗಳನ್ನು ಆಡಿದ್ದು ಒಂಬತ್ತರಲ್ಲಿ ಗೆದ್ದಿದೆ. ಒಟ್ಟು 18 ಪಾಯಿಂಟ್ಸ್ ಕಲೆಹಾಕಿರುವ ಈ ತಂಡ ಈಗಾಗಲೇ ‘ಪ್ಲೇ ಆಫ್’ ಪ್ರವೇಶಿಸಿದೆ.

ಮಹೇಂದ್ರ ಸಿಂಗ್ ದೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ಈ ಹಾದಿಯಲ್ಲಿ ಇನ್ನೊಂದು ಪಂದ್ಯ ಗೆಲ್ಲಬೇಕಿದೆ.

ಈ ತಂಡ 11 ಪಂದ್ಯಗಳ ಪೈಕಿ ಏಳರಲ್ಲಿ ಗೆದ್ದಿದ್ದು 14 ಪಾಯಿಂಟ್ಸ್ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.