ಲಂಡನ್: ಎಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.
ಇದರಿಂದಾಗಿ ಭಾರತಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಅಹ್ಮದ್ ಅವರಿಗೆ ಇದು ಅಗ್ನಿಪರೀಕ್ಷೆಯ ಪಂದ್ಯವಾಗಿದೆ.