ಲಂಡನ್ (ರಾಯಿಟರ್ಸ್/ಎಎಫ್ಪಿ): ಆಲ್ ಇಂಗ್ಲೆಂಡ್ ಟೆನಿಸ್ ಕ್ಲಬ್ ಭಾನುವಾರ ವಿಶ್ವದ ಬಲಿಷ್ಠ ಆಟಗಾರರ ಹೋರಾಟಕ್ಕೆ ವೇದಿಕೆಯಾಗಲಿದೆ.
ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಹೋರಾಟದಲ್ಲಿ ನೊವಾಕ್ ಜೊಕೊ ವಿಚ್ ಮತ್ತು ಎರಡನೇ ಸ್ಥಾನದಲ್ಲಿರುವ ಸ್ವಿಟ್ಜರ್ಲೆಂಡ್ನ ರೋಜರ್ ಫೆಡರರ್ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.