ನವದೆಹಲಿ (ಐಎಎನ್ಎಸ್): ಕರ್ನಾಟಕ ಮಹಿಳಾ ತಂಡ ಇಲ್ಲಿ ನಡೆಯುತ್ತಿರುವ 64ನೇ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಚಾಂಪಿಯನ್ ಷಿಪ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ತ್ಯಾಗರಾಜ ಕ್ರೀಡಾ ಸಂಕೀರ್ಣದಲ್ಲಿ ಸೋಮವಾರ ನಡೆದ ಪ್ರೀ ಕ್ವಾರ್ಟರ್ ಫೈನಲ್ ಹೋರಾಟದಲ್ಲಿ ಕರ್ನಾಟಕ ಮಹಿಳಾ ತಂಡದವರು 84–72ರಲ್ಲಿ ಆಂಧ್ರಪ್ರದೇಶ ತಂಡವನ್ನು ಮಣಿಸಿದರು.

ಪುರುಷರಿಗೆ ನಿರಾಸೆ: ಪುರುಷರ ವಿಭಾಗದ ಪಂದ್ಯದಲ್ಲಿ ಕರ್ನಾಟಕ 54–87ರಲ್ಲಿ ತಮಿಳು ನಾಡು ತಂಡದ ವಿರುದ್ಧ ನಿರಾಸೆ ಅನುಭವಿಸಿತು. ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ 90–77ರಲ್ಲಿ ರಾಜಸ್ತಾನದ ಎದುರು ಜಯ ಪಡೆದಿತ್ತು.

ಸೆಮಿಫೈನಲ್ಗೆ ಉತ್ತರಾಖಂಡ: ಪುರುಷರ ವಿಭಾಗದ ಮತ್ತೊಂದು ಕ್ವಾರ್ಟರ್ ಫೈನಲ್ ಪೈಪೋಟಿಯಲ್ಲಿ ಹಾಲಿ ಚಾಂಪಿಯನ್ ಉತ್ತರಾ ಖಂಡ ತಂಡ 93–74ರಲ್ಲಿ ಕೇರಳ ತಂಡವನ್ನು ಮಣಿಸಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು.

ದಿನದ ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸರ್ವೀಸಸ್ 104–72ರಲ್ಲಿ ರೈಲ್ವೇಸ್ ತಂಡವನ್ನು ಸೋಲಿಸಿ ನಾಲ್ಕರ ಘಟ್ಟಕ್ಕೆ ತಲುಪಿತು.

ಮಹಿಳಾ ವಿಭಾಗದ ಕ್ವಾರ್ಟರ್ ಫೈನಲ್ ಹೋರಾಟದಲ್ಲಿ ದೆಹಲಿ 111–58ರಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಸೆಮಿಫೈನಲ್ ಪ್ರವೇಶ ಪಡೆದುಕೊಂಡಿತು.

ಈ ವಿಭಾಗದ ಇತರ ಪಂದ್ಯಗಳಲ್ಲಿ ಹರಿ ಯಾಣ 75–59ರಲ್ಲಿ ಛತ್ತೀಸಗಡದ ಮೇಲೂ, ರೈಲ್ವೇಸ್ 90–50ರಲ್ಲಿ ತಮಿಳುನಾಡು ತಂಡದ ಎದುರೂ ಗೆದ್ದು ನಾಲ್ಕರ ಘಟ್ಟಕ್ಕೆ ತಲುಪಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.