ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿರುವ ಸನ್ರೈಸರ್ಸ್ ಹೈದರಾಬಾದ್ ಮತ್ತು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಹಣಾಹಣಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್ ಪ್ರವೇಶಿಸಲು ನೇರ ಅರ್ಹತೆ ದೊರೆಯಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶವಿದೆ. ಸೋತ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವನ್ನು 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎದುರಿಸಿ ಗೆಲ್ಲಬೇಕಿದೆ.