ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ಸ್ನಲ್ಲಿ ಶನಿವಾರ ನಡೆದ ಐಪಿಎಲ್ನ 18ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ 9 ವಿಕೆಟ್ ಜಯ ಸಾಧಿಸಿದೆ.
ಕೆಕೆಆರ್ ಎದುರು ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟಿಂಗ್ ಆರಂಭಿಸಿದ ಕೆಕೆಆರ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು(ಕ್ರಿಸ್ ಲಿನ್ 74, ರಾಬಿನ್ ಉತ್ತಪ್ಪ 34, ದಿನೇಶ್ ಕಾರ್ತಿಕ್ 43).
ಮಳೆ ಬಂದ ಪರಿಣಾಮ ಪಂದ್ಯವನ್ನು ಸ್ವಲ್ಪ ಸಮಯ ಸ್ಥಗಿತಗೊಳಿಸಲಾಗಿತು. ಆಗ ಡಕ್ವರ್ಥ್ ಲೂಯಿಸ್ ನಿಯಮವನ್ನು ಅನ್ವಯಿಸಲಾಯಿತು. ಅದರ ಪ್ರಕಾರ ಪಂಜಾಬ್ ತಂಡದ ಗೆಲುವಿಗೆ 13 ಓವರ್ಗಳಲ್ಲಿ 125 ರನ್ಗಳ ಗುರಿ ನಿಗದಿಯಾಯಿತು.