ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೂ ಮುನ್ನ ಎರಡನೇ ಸ್ಥಾನ ಹೊಂದಿದ್ದ ಕೊಹ್ಲಿ, ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಔಟಾಗದೆ 76 ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಔಟಾಗದೆ 81ರನ್ ಗಳಿಸಿ ಮಿಂಚಿದ್ದರು. ಹೀಗಾಗಿ ಅವರು ಮತ್ತೊಮ್ಮೆ ಅಗ್ರಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಬಲಗೈ ಬ್ಯಾಟ್ಸ್ಮನ್ ಕೊಹ್ಲಿ ಈ ವರ್ಷದ ಜನವರಿಯಲ್ಲೂ ಮೊದಲ ಸ್ಥಾನಕ್ಕೇರಿದ್ದರು.