ನವದೆಹಲಿ (ಪಿಟಿಐ/ಐಎಎನ್‌ಎಸ್): ಬೀಜಿಂಗ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕಂಚು ಜಯಿಸಿದ್ದ ವಿಜೇಂದರ್ ಸಿಂಗ್ ಹಾಗೂ ಅಖಿಲ್ ಕುಮಾರ್ ಅವರು ಸೆಪ್ಟಂಬರ್ 22ರಿಂದ ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆಯಲಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುವ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಯುವ ರಾಷ್ಟ್ರೀಯ ಚಾಂಪಿಯನ್ ದೇವೆಂದ್ರೂ ಸಿಂಗ್ ಸಹ ಸ್ಥಾನ ಗಿಟ್ಟಿಸಿದ್ದಾರೆ. ಇತ್ತೀಚಿಗೆ 49 ಕೆ.ಜಿ. ಲೈಟ್ ಫ್ಲೇ ವೇಟ್ ವಿಭಾಗದಲ್ಲಿ ಅವರು ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಗೆದ್ದಿದ್ದ ಅಮನ್‌ದೀಪ್ ಸಿಂಗ್ ಅವರನ್ನು ಮಣಿಸಿದ್ದರು.

ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದಿದ್ದ ಮನಪ್ರೀತ್ ಸಿಂಗ್, ಪರಮಜೀತ್ ಸಮೋಟಾ ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 2012ರ ಲಂಡನ್ ಒಲಿಂಪಿಕ್‌ಗೆ ಅರ್ಹತೆ ಪಡೆಯಲು ಮೊದಲ ಅವಕಾಶ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.