ಮಂಗಳವಾರ, ಜೂನ್ 2, 2020
27 °C

ಶ್ರೀಲಂಕಾ ಸ್ಫೋಟ: ಹತ್ತು ದಿನ ಹಿಂದೆಯೇ ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಕೊಲಂಬೊ: ಶ್ರೀಲಂಕಾದಲ್ಲಿ ಸರಣಿ ಬಾಂಬ್ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಅಲ್ಲಿನ ಪೊಲೀಸ್ ಮುಖ್ಯಸ್ಥರು ಹತ್ತು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ದೇಶದ ಪ್ರಮುಖ ಚರ್ಚ್‌ಗಳ ಮೇಲೆ ದಾಳಿ ಆತ್ಮಾಹುತಿ ದಾಳಿಗೆ ಸಂಚು ಹೂಡಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಮಾಹಿತಿ ಆಧರಿಸಿ ಪೊಲೀಸ್ ಮುಖ್ಯಸ್ಥ ಪುಜುತ್ ಜಯಸುಂದರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ್ದರು. ಈ ಕುರಿತು ದಾಖಲೆಗಳು ಲಭ್ಯವಾಗಿವೆ ಎಂದು ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದಲ್ಲಿ ಸುರತ್ಕಲ್ ಮೂಲದ ಮಹಿಳೆ ಸಾವು

‘ಪ್ರಮುಖ ಚರ್ಚ್‌ಗಳು ಮತ್ತು ಭಾರತೀಯ ರಾಯಭಾರ ಕಚೇರಿಗಳನ್ನು ಗುರಿಯಾಗಿಸಿ ಆತ್ಮಾಹುತಿ ದಾಳಿ ನಡೆಸಲು ಎನ್‌ಟಿಜೆ (ನ್ಯಾಷನಲ್ ತೌಹೀತ್ ಜಮಾ ಅತ್) ಸಂಘಟನೆ ಸಂಚು ರೂಪಿಸುತ್ತಿದೆ ಎಂಬುದಾಗಿ ವಿದೇಶಿ ಗುಪ್ತಚರ ಸಂಸ್ಥೆಯೊಂದು ಸುಳಿವು ನೀಡಿದೆ’ ಎಂದು ಎಚ್ಚರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: ಕೊಲಂಬೊ: ಸರಣಿ ಬಾಂಬ್ ಸ್ಫೋಟದಲ್ಲಿ ಕಾಸರಗೋಡು ನಿವಾಸಿ ಸಾವು​

ಎನ್‌ಟಿಜೆಯು ಮೂಲಭೂತವಾದಿ ಮುಸ್ಲಿಂ ಸಂಘಟನೆಯಾಗಿದೆ. ಕಳೆದ ವರ್ಷ ಶ್ರೀಲಂಕಾದ ಹಲವೆಡೆ ಬೌದ್ಧ ಪ್ರತಿಮೆಗಳನ್ನು ನಾಶಪಡಿಸಿದ ಆರೋಪವೂ ಈ ಸಂಘಟನೆ ಮೇಲಿದೆ.

ಈವರೆಗೂ ಯಾವುದೇ ಸಂಘಟನೆಯು ಶ್ರೀಲಂಕಾ ಸರಣಿ ಬಾಂಬ್ ದಾಳಿಯ ಹೊಣೆಹೊತ್ತಿಲ್ಲ.

ಇನ್ನಷ್ಟು...

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: 156 ಸಾವು, 35 ಮಂದಿ ಹೊರ ರಾಷ್ಟ್ರದವರು

ಶ್ರೀಲಂಕಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ: 2 ಸಾವು​

* ‘ಇಂತಹ ಕ್ರೌರ್ಯಕ್ಕೆ ಆಸ್ಪದವಿಲ್ಲ’: ಶ್ರೀಲಂಕಾ ದಾಳಿ ಖಂಡಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು