‘ನಾನು ಏನು ಎಂದು ತೋರಿಸಿದ್ದೇನೆ’

ಸೋಮವಾರ, ಜೂನ್ 17, 2019
28 °C

‘ನಾನು ಏನು ಎಂದು ತೋರಿಸಿದ್ದೇನೆ’

Published:
Updated:

ಚಾಮರಾಜನಗರ: ‘ಈ ಎರಡೂವರೆ ವರ್ಷಗಳಲ್ಲಿ ನಾನು ಏನು ಎನ್ನುವುದನ್ನು ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಹಾಗೂ ಧ್ರುವನಾರಾಯಣ ಅವರಿಗೆ ತೋರಿಸಿದ್ದೇನೆ’ ಎಂದು ವಿ.ಶ್ರೀನಿವಾಸ ಪ್ರಸಾದ್‌ ಅವರು ಪ್ರತಿಕ್ರಿಯಿಸಿದರು.

1,817 ಮತಗಳಿಂದ ಧ್ರುವನಾರಾಯಣ ಅವರ ವಿರುದ್ಧ ಗೆಲುವು ಸಾಧಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಈ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

‘ಇಡೀ ದೇಶದಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ಇದಕ್ಕೆ ನರೇಂದ್ರ ಮೋದಿ ಅವರ ಆಡಳಿತ ಕಾರಣ. ಮಾಜಿ ಪ್ರಧಾನಿ ದೇವೇಗೌಡರು, ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಘಟಾನುಘಟಿಗಳಿಗೆಲ್ಲ ಜನ ತಕ್ಕ ಪಾಠ ಕಲಿಸಿದ್ದಾರೆ’ ಎಂದರು.

ಗೆಲ್ಲುವ ಮೂಲಕ ಸಿದ್ದರಾಮಯ್ಯ ವಿರುದ್ಧ ಸೇಡು ತೀರಿಸಿಕೊಂಡಿರಾ ಎಂದು ಕೇಳಿದ್ದಕ್ಕೆ, ‘ಜನರೇ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !