ಕಾಮಗಾರಿಗೆ ಚಾಲನೆ

7

ಕಾಮಗಾರಿಗೆ ಚಾಲನೆ

Published:
Updated:

ಬೆಂಗಳೂರು: ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ಡಿ.ಎನ್.ಎಸ್.ಬಡಾವಣೆ, ಮೂರ್ತಮ್ಮ ಬಡಾವಣೆ ಮತ್ತು ಪಟಾಕಿ ಗೋಡನ್ ರಸ್ತೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಭೈರತಿ ಬಸವರಾಜ ಗುದ್ದಲಿ ಪೂಜೆ ನೆರವೇರಿಸಿದರು.

‘ಬಿಬಿಎಂಪಿಯ ರಾಜ್ಯ ಹಣಕಾಸು ನಿಧಿ ಹಾಗೂ ಶಾಸಕರ ನಿಧಿಯ ತಲಾ ₹ 50 ಲಕ್ಷ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಮತ್ತು ಕಾಂಕ್ರೀಟ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.  ಅಧಿಕಾರಿಗಳು ನಿಗದಿತ ಸಮಯದೊಳಗೆ ಇವುಗಳನ್ನು ಪೂರ್ಣಗೊಳಿಸಬೇಕು’ ಎಂದು ಅವರು ಸೂಚಿಸಿದರು. ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿದರು.

‘ಈಗಾಗಲೇ ಮಳೆಗಾಲ ಆರಂಭವಾಗಿದೆ. ಪ್ರವಾಹ ಉಂಟಾಗದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವ ಸಲುವಾಗಿ ಅಧಿಕಾರಿಗಳ ಸಭೆ ನಡೆಸಿದ್ದು, ಪೂರ್ವಸಿದ್ಧತೆ ಮಾಡಿದ್ದೇವೆ’ ಎಂದು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !