ಸೋಮವಾರ, ಜೂನ್ 27, 2022
24 °C
ಪರೀಕ್ಷಾ ವಿಧಾನದ ಗೊಂದಲಕ್ಕೆ ಸಂಬಂಧಿಸಿದಂತೆ ಎಬಿವಿಪಿ ಹೇಳಿಕೆ

ಸಾಮೂಹಿಕ ಉತ್ತೀರ್ಣ ವಿಧಾನದ ಬದಲು ಬೇರೆ ಮಾದರಿ ಅನುಸರಿಸಲು ಎಬಿವಿಪಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ನಿಂದ ಶಿಕ್ಷಣ ವಲಯದಲ್ಲಿ ಪರೀಕ್ಷೆಗಳ ಕುರಿತು ಸಾಕಷ್ಟು ಗೊಂದಲ ಸೃಷ್ಟಿಯಾಗಿದೆ. ಸಾಮೂಹಿಕವಾಗಿ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಸಾಮೂಹಿಕವಾಗಿ ಉತ್ತೀರ್ಣ ಮಾಡುವ ಬದಲು, ಪರ್ಯಾಯ ಪರೀಕ್ಷಾ ವಿಧಾನಗಳನ್ನು ಸರ್ಕಾರ ಅನುಸರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಹೇಳಿದೆ. 

‘ಎಬಿವಿಪಿಯು ದೂರವಾಣಿ ಕರೆ ಮಾಡುವ ಮೂಲಕ 8.68 ಲಕ್ಷ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದೆ. ಸಾಮೂಹಿಕ ಉತ್ತೀರ್ಣದ ಬದಲು, ಕ್ಯಾರಿ ಓವರ್‌ ಪದ್ಧತಿ, ಓಪನ್ ಬುಕ್‌ ಪರೀಕ್ಷೆ, ವರದಿ ಮತ್ತು ಗೃಹ ಕಾರ್ಯ (ಅಸೈನ್‌ಮೆಂಟ್‌)ವನ್ನು ಪರಿಗಣಿಸಿ, ಸೂಕ್ತ ಅಂಕಗಳನ್ನು ನೀಡಿ ಉತ್ತೀರ್ಣ ಮಾಡಬೇಕು ಎಂಬ ಅಭಿಪ್ರಾಯವನ್ನು ಈ ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ’ ಎಂದು ಎಬಿವಿಪಿ ಹೇಳಿದೆ. 

‘ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ವಿಶ್ವವಿದ್ಯಾಲಯಗಳು ಬೇರೆ ಬೇರೆ ರೀತಿ ನಿರ್ಧಾರ ತೆಗೆದುಕೊಳ್ಳುತ್ತಿವೆ. ಯಾವುದೇ ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯಗಳು ಸ್ವತಂತ್ರವಾಗಿವೆ. ಆದರೆ, ಎಷ್ಟೋ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅಗತ್ಯ ಸೌಲಭ್ಯಗಳು ಇರುವುದಿಲ್ಲ. ಅಲ್ಲದೆ, ಯಾವುದೇ ಪದ್ಧತಿಯು, ದೀರ್ಘಾವಧಿಯಲ್ಲಿ ಯಾವುದೇ ಒಬ್ಬ ವಿದ್ಯಾರ್ಥಿಯ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎಂಬ ಕಾಳಜಿ ನಮ್ಮದು’ ಎಂದು ಅದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು