ಮಂಗಳವಾರ, ಸೆಪ್ಟೆಂಬರ್ 21, 2021
25 °C

ಕರ್ನೂಲ್: ಕಲ್ಲು ಕ್ವಾರಿಯಲ್ಲಿ ಸ್ಫೋಟ, 11 ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಕರ್ನೂಲ್: ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಕಲ್ಲು ಕ್ವಾರಿಯೊಂದರಲ್ಲಿ ಪ್ರಬಲ ಸ್ಫೋಟ ಸಂಭವಿಸಿ 11 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಸಾವಿಗೀಡಾದ ಕಾರ್ಮಿಕರು ಒಡಿಶಾ ಮೂಲದವರಾಗಿದ್ದಾರೆ. ಆಲೂರ್‌ ತಾಲೂಕಿನ ಹಾತಿ ಬೆಲ್ಗಲ್ ಕ್ವಾರಿಯಲ್ಲಿ ಎಂದಿನಂತೆ ಕೆಲಸ ನಡೆಯುತ್ತಿತ್ತು. ಸುಮಾರು 20 ಕಾರ್ಮಿಕರು ಅಲ್ಲಿದ್ದರು. ಅಚಾನಕ್ ಸ್ಫೋಟ ಸಂಭವಿಸಿದ್ದು, ಕೆಲವು ಕಾರ್ಮಿಕರು ಅಲ್ಲಿ ಸಿಲುಕಿಕೊಂಡರು ಎಂದ ಪ್ರಕರಣದ ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ.

ಈ ದುರ್ಘಟನೆಯಲ್ಲಿ 11 ಮಂದಿ ಸಾವಿಗೀಡಾಗಿದ್ದು, 4 ಮಂದಿಗೆ ಗಾಯಗಳಾಗಿವೆ., ಗಾಯಾಳುಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಖೇದ ವ್ಯಕ್ತ ಪಡಿಸಿದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು