ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಸಿ ರಸ್ತೆ ಕಾಮಗಾರಿ ಕಳಪೆ: ಆರೋಪ

Last Updated 24 ಫೆಬ್ರುವರಿ 2020, 9:43 IST
ಅಕ್ಷರ ಗಾತ್ರ

ಯಡ್ರಾಮಿ: ತಾಲ್ಲೂಕಿನ ವರವಿ ಗ್ರಾಮದಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಿ.ಸಿ ರಸ್ತೆ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದೆಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ಕಾಮಗಾರಿಗೆ ಮರಳು ಬಳಸದೇ ಜಲ್ಲಿಕಲ್ಲಿನ ಬೂದಿಯನ್ನು ಬಳಸಲಾಗಿದೆ. ಹಳೆ ಎಸ್.ಸಿ ವಾರ್ಡ್, ಗ್ರಾಮದ ಹೊಲಗಳಿಗೆ ಹೋಗುವ ರಸ್ತೆ, ಊರ ಅಗಸಿ, ಹನುಮಾನ್ ದೇವಸ್ಥಾನ ಮತ್ತು ದಾದಾ ತಿವಾರಿ ಮನೆಯ ಮುಂದಿನ ರಸ್ತೆಗಳು ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿವೆ.

ಅಧಿಕಾರಿಗಳು ಮತ್ತು ಗುತ್ತಿಗೆದಾರರು ಒಳಒಪ್ಪಂದ ಮಾಡಿಕೊಂಡು ಅನುದಾನ ದುರ್ಬಳಕೆ ಮಾಡಿದ್ದಾರೆ ಎಂದುಗ್ರಾಮಸ್ಥರು ದೂರಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

‘ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಗ್ರಾಮಸ್ಥರು ನಮ್ಮ ಗಮನಕ್ಕೆ ತಂದಿದ್ದಾರೆ. ಗುತ್ತಿಗೆದಾರರಿಗೆ ಎರಡನೇ ಹಂತದ ಬಿಲ್ ತಡೆಹಿಡಿಯಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT