ಮಂಗಳವಾರ, ಏಪ್ರಿಲ್ 7, 2020
19 °C

600 ದಾಟಿತು ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ವಿವಿಧೆಡೆ ಕೊರೊನಾವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಬುಧವಾರ 606ಕ್ಕೆ ಮುಟ್ಟಿದೆ. ಮಂಗಳವಾರ ಈ ಸಂಖ್ಯೆ 519 ಇತ್ತು. ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು 'ಕೋವಿಡ್-19'ನಿಂದ ಮೃತಪಟ್ಟಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ದೇಶದ ವಿವಿಧೆಡೆ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10 ತಲುಪಿದೆ. ಈ ಪೈಕಿ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮೃತಪಟ್ಟ ಮಹಿಳೆಯ ಪ್ರಯೋಗಾಲಯದ ಪರೀಕ್ಷೆ ವರದಿ ಇನ್ನೂ ಬರಬೇಕಿದೆ. 

ವಾರಾಣಸಿ ಕ್ಷೇತ್ರದ ಜನರೊಂದಿಗೆ ವಿಡಿಯೊ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಮತ್ತು ವಿಮಾನ ಯಾನ ಸಂಸ್ಥೆಗಳ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

'ಆಸ್ಪತ್ರೆಗಳಲ್ಲಿರುವ ಬಿಳಿಬಟ್ಟೆ ಧರಿಸಿದವರು ಈಗ ನಮ್ಮ ಪಾಲಿಗೆ ದೇವರು. ಅವರನ್ನು ಗೌರವಿಸಬೇಕು. ತಮ್ಮ ಜೀವ ಒತ್ತೆಯಿಟ್ಟು ನಮ್ಮ ಜೀವ ಉಳಿಸಲು ಅವರು ಶ್ರಮಿಸುತ್ತಿದ್ದಾರೆ' ಎಂದು ಪ್ರಧಾನಿ ಕಿವಿಮಾತು ಹೇಳಿದರು.

2021ರ ಜನಗಣತಿಯ ಮೊದಲ ಹಂತದ ಕೆಲಸಗಳು ಮತ್ತು ರಾಷ್ಟ್ರೀಯ ನಾಗರಿಕ ಪಟ್ಟಿಯ (ಎನ್‌ಪಿಆರ್) ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಸೆ.30ಕ್ಕೆ ಮುಂದೂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು