ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಜುಲೈ 1 ರಿಂದ

Last Updated 14 ಮೇ 2019, 19:17 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ವತಿಯಿಂದಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 11ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆಉಚಿತ ತರಬೇತಿ ನೀಡಲಾಗುವುದು.

ತರಗತಿಗಳು ಜುಲೈ 1ರಿಂದ ಆರಂಭವಾಗಲಿವೆ.ವಿದ್ಯಾರ್ಥಿಗಳಿಗೆ ₹1 ಸಾವಿರ ಮೌಲ್ಯದ ಪುಸ್ತಕ ಹಾಗೂ ತಿಂಗಳು ₹1ಸಾವಿರ ಸ್ಟೈಪೆಂಡ್‌ ನೀಡಲಾಗುವುದು.

ಆಸಕ್ತರು ತಮ್ಮ ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್‌ ಪ್ರತಿಗಳನ್ನು ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ವಿದ್ಯಾರ್ಹತೆ: ಅಂಗೀಕೃತ ಕಾಲೇಜಿನಿಂದ ಪಿಯುಸಿ ಅಥವಾ ತತ್ಸಮಾನ ಪದವಿ.

ವಿಳಾಸ: ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ, ಉದ್ಯೋಗ ಮಹಾನಿರ್ದೇಶನಾಲಯದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಕೌಶಲ ಭವನ ಹಿಂಭಾಗ, ಸರ್ಕಾರಿ ಕೈಗಾರಿಕೆ ತರಬೇತಿ ಕೇಂದ್ರದ ಆವರಣ, ಡೇರಿ ವೃತ್ತ, ಬೆಂಗಳೂರು–29.

ಸಂಪರ್ಕ: 080–26636192.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT