ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನ ಹಡಗಲಿ: ಮತಗಟ್ಟೆಗಳ ಪರಿಶೀಲನೆ

Last Updated 7 ಏಪ್ರಿಲ್ 2018, 6:30 IST
ಅಕ್ಷರ ಗಾತ್ರ

ಹೂವಿನಹಡಗಲಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲ ಮತಗಟ್ಟೆಗಳನ್ನು ಕ್ಷೇತ್ರ ಚುನಾವಣಾಧಿಕಾರಿ ಎಂ.ಎಸ್. ದಿವಾಕರ ಶುಕ್ರವಾರ ಪರಿಶೀಲಿಸಿದರು.

ಮತಗಟ್ಟೆಗಳಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ, ಕೊಠಡಿಯಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿದರು. ಕೆಲವೆಡೆ ಸಣ್ಣಪುಟ್ಟ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚಿಸಿದ ಅವರು, ಮತಗಟ್ಟೆ ಬಳಿ ಯಾವುದೇ ರಾಜಕೀಯ ಪಕ್ಷದ ನಾಯಕರ ಭಾವಚಿತ್ರ, ಚಿಹ್ನೆಗಳು ಇರದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಕೊಮಾರನಹಳ್ಳಿ ತಾಂಡಾದ ಶಾಲೆಗಳಲ್ಲಿ ತೆರೆಯಲಾದ ಮತಗಟ್ಟೆಗಳನ್ನು ಅಧಿಕಾರಿಗಳು ವೀಕ್ಷಿಸಿದರು. ಬಳಿಕ ಕೊಮಾರನಹಳ್ಳಿ ತಾಂಡಾದ ಚೆಕ್‌ಪೋಸ್ಟ್‌ ಪರಿಶೀಲಿಸಿ, ಹಣ ಹಾಗೂ ಮದ್ಯ ಸಾಗಾಟದ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದರು.

ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಯು.ಎಚ್.ಸೋಮಶೇಖರ, ಪುರಸಭೆ ಮುಖ್ಯಾಧಿಕಾರಿ ಪ್ರೇಮ್‌ ಚಾರ್ಲ್ಸ್‌, ಆರೋಗ್ಯ ನಿರೀಕ್ಷಕ ಶ್ರೀನಿವಾಸ ಹಾಗೂ ಮತಗಟ್ಟೆ ಅಧಿಕಾರಿಗಳು ಇದ್ದರು.

ಸಹಕಾರ ಸಂಘಗಳ ಸಭೆ: ಶುಕ್ರವಾರ ಬೆಳಿಗ್ಗೆ ಚುನಾವಣಾಧಿಕಾರಿ ಎಂ.ಎಸ್. ದಿವಾಕರ ತಾಲ್ಲೂಕಿನ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಾಹಕರ ಸಭೆ ನಡೆಸಿದರು.‘ಚುನಾವಣಾ ಅಕ್ರಮ ಎಸಗುವ ಉದ್ದೇಶದಿಂದ ಖಾತೆಗಳಿಗೆ ಹಣ ವರ್ಗಾವಣೆ ಆಗುವ ಸಂಭವವಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಅಲ್ಲದೇ ಹಣಕಾಸಿನ ವಹಿವಾಟು ಕುರಿತು ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT